ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ, ಜನವರಿ 1ರಿಂದಲೇ 2,000 ರೂ. ಗೌರವಧನ ಹೆಚ್ಚಳ ಜಾರಿ

Must read

ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ, ಜನವರಿ 1ರಿಂದಲೇ 2,000 ರೂ. ಗೌರವಧನ ಹೆಚ್ಚಳ ಜಾರಿ

ಬೆಂಗಳೂರು: ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಕಳೆದ 13 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದೆ. ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು 2,000 ರೂಪಾಯಿ ಹೆಚ್ಚಿಸುವ ಸಂಬಂಧ ಅಧಿಕೃತ ಲಿಖಿತ ಟಿಪ್ಪಣಿ ಹೊರಡಿಸಿದೆ.
ಮೌಖಿಕ ಭರವಸೆಗೆ ಒಪ್ಪದೆ ಲಿಖಿತ ಆದೇಶ ನೀಡುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಮುಂದುವರಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿಗಳ ಕಾರ್ಯದರ್ಶಿ ಎಸ್.ಎಸ್. ನಕುಲ್ ಅವರು ಗೌರವಧನ ಹೆಚ್ಚಳದ ಕುರಿತು ಅಧಿಕೃತ ಟಿಪ್ಪಣಿ ಹೊರಡಿಸಿದ್ದಾರೆ.
ನವೆಂಬರ್ 28ರಂದು ಮುಖ್ಯಮಂತ್ರಿ ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳೊಂದಿಗೆ ಸವಿವರವಾದ ಸಭೆ ನಡೆಸಿ ಅವರ ಬೇಡಿಕೆಗಳನ್ನು ಆಲಿಸಿದ್ದರು. ಈ ಸಭೆಯಲ್ಲಿ ಮಾಸಿಕ ಗೌರವಧನವನ್ನು 2,000 ರೂಪಾಯಿ ಹೆಚ್ಚಿಸಲು ನಿರ್ಧಾರ ಕೈಗೊಳ್ಳಲಾಗಿತ್ತು.
ಇನ್ನು ಗೌರವಧನ ಹೆಚ್ಚಳ ಯಾವ ದಿನದಿಂದ ಜಾರಿಗೆ ಬರಬೇಕು ಎಂಬ ಕಾರ್ಯಕರ್ತೆಯರ ಮನವಿಯನ್ನೂ ಸರ್ಕಾರ ಸಕಾರಾತ್ಮಕವಾಗಿ ಪರಿಗಣಿಸಿದೆ. 2027ರ ಜನವರಿ 1ರಿಂದಲೇ ಹೆಚ್ಚುವರಿ 2,000 ರೂಪಾಯಿ ಗೌರವಧನ ನೀಡಲು ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದಾರೆ.
ಈ ನಿರ್ಧಾರವನ್ನು ಜಾರಿಗೆ ತರಲು ಅಗತ್ಯವಿರುವ ಪ್ರಕ್ರಿಯೆಗಳನ್ನು ಆದ್ಯತೆಯ ಮೇರೆಗೆ ಆರಂಭಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿಗಳ ಕಚೇರಿಯಿಂದ ನಿರ್ದೇಶನ ನೀಡಲಾಗಿದೆ.
13 ದಿನಗಳ ನಿರಂತರ ಹೋರಾಟದ ಬಳಿಕ ಸರ್ಕಾರದಿಂದ ಲಿಖಿತ ಟಿಪ್ಪಣಿ ಹೊರಬಿದ್ದಿರುವುದು ಆಶಾ ಕಾರ್ಯಕರ್ತೆಯರಿಗೆ ಮಹತ್ವದ ಬೆಳವಣಿಗೆಯಾಗಿದೆ.

- Advertisement -spot_img

More articles

- Advertisement -spot_img

Latest article