ಮಾಜಿ ಅಬಕಾರಿ ಸಚಿವ ಹೆಚ್.ವೈ ಮೇಟಿ ರಾಸಲೀಲೆ ಪ್ರಕರಣದ ಬೆನ್ನಲ್ಲೆ ತನ್ನ ಬಳಿ ಇನ್ನು ಕೆಲವು ರಾಜಕೀಯ ವ್ಯಕ್ತಿಗಳ ಸಿಡಿ ಇದೆ ಎಂದ ಆರ್‍ಟಿಐ ಕಾರ್ಯಕರ್ತ ಚಂದ್ರಶೇಖರ್ ಹೇಳಿಕೆಯಿಂದ ಕೈ ಪಾಳಯದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಅದ್ರಲ್ಲಿ ಓರ್ವ ಕೈ ಶಾಸಕ ತನ್ನ ವಿರುದ್ದದ ಸೆಕ್ಸ್ ಸಿಡಿ ಬಹಿರಂಗಗೊಳಿಸದಂತೆ ಹೈಕೋರ್ಟ್ ಮೆಟ್ಟಿಲೇರಿ ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದಾರೆ..! ಬೀಳಗಿ ಶಾಸಕ ಜೆಟಿ ಪಾಟೀಲ (ಜಗದೀಶ್ ತಿಮ್ಮನಗೌಡ) ತನಗೆ ಸಂಬಂಧಿಸಿದ ಯಾವುದೆ ಸೆಕ್ಸ್ ಸಿಡಿಯನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ತಡೆ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ..! ಈ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ಪೀಠ, ಜೆಟಿ ಪಾಟೀಲ್ ಅವರಿಗೆ ಸಂಬಂಧ ಪಟ್ಟ ಯಾವುದೇ ಅಶ್ಲೀಲ ವಿಡಿಯೋಗಳು ಮಾಧ್ಯಮದಲ್ಲಿ ಪ್ರಸಾರ ಮಾಡಬಾರದು ಎಂದು ತಡೆಯಾಜ್ಞೆ ನೀಡಿದೆ..! ಹೆಚ್.ವೈ ಮೇಟಿ ರಾಸಲೀಲೆಯ ಸಿಡಿ ಬಹಿರಂಗ ಪಡಿಸಿ ಅವರನ್ನು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಮಾಡಿದ್ದ ಚಂದ್ರಶೇಖರ್ ಅದಾದ ನಂತರ ತನ್ನ ಬಳಿ ಇನ್ನೂ ಮೂವರ ಸಿ.ಡಿ ಇದೆ ಎಂದು ಹೇಳಿಕೆ ನೀಡಿದ್ದರು. ಇದರಿಂದ ಭಯಗೊಂಡ ಜೆ.ಟಿ ಪಾಟೀಲ್ ಕೋರ್ಟ್ ಮೊರೆ ಹೋಗಿದ್ದಾರೆ..!
Like us on Facebook The New India Times
ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333
POPULAR STORIES :
ಸದ್ಯದಲ್ಲೇ ಇಬ್ಬರು ರಾಜಕೀಯ ವ್ಯಕ್ತಿಗಳ ಸಿ.ಡಿ. ರಿಲೀಸ್ : ರಾಜಶೇಖರ ಮುಲಾಲಿ
ಸೀರೆ ಕೊಳ್ಳೋಕೆ ಮುಗಿ ಬಿದ್ರು ಜನ..! ಸೀರೆಯ ಬೆಲೆ ಕೇವಲ 1. ರೂಪಾಯಿ ಮಾತ್ರ..!
ಸತ್ತ ವ್ಯಕ್ತಿಯ ಶವ ಸಂಸ್ಕಾರಕ್ಕೆ ನೀಡ್ತಾ ಇಲ್ಲ ಒಂದಿಡಿ ಜಾಗ..?
ಕನ್ನಡಿಗರಿಗಿಲ್ಲಿದೆ ಶುಭ ಸುದ್ದಿ: ಖಾಸಗಿ ವಲಯದಲ್ಲಿ ಕನ್ನಡಿಗರಿಗೂ ಮೀಸಲಾತಿ