ಮನೆ ಮುಂದೆ ಪಾರ್ಕಿಂಗ್ ಖಾತ್ರಿಪಡಿಸಿ ಕಾರು ಖರೀದಿಸಿ..! ಮೊದ್ಲು ನೀವು ಖರೀದಿಸುವ ಕಾರಿಗೆ ಪಾರ್ಕಿಂಗ್ ವ್ಯವಸ್ಥೆ ಇದೆಯಾ..? ಅನ್ನೋದನ್ನು ಖಾತ್ರಿಪಡಿಸಿಕೊಂಡ ನಂತರವಷ್ಟೇ ಕಾರು ಖರೀದಿಸಿಕೊಳ್ಳಬೇಕು..! ಹೌದು.. ನಗರಗಳಲ್ಲಿ ಹೆಚ್ಚುತ್ತಿರುವ ಪಾರ್ಕಿಂಗ್ ಸಮಸ್ಯೆಗೆ ಕಡಿವಾಣ ಹಾಕುವ ದೃಷ್ಠಿಯಿಂದ ಕೇಂದ್ರ ಸರ್ಕಾರ ಹೊಸದೊಂದು ನಿಯಮ ತರಲು ಮುಂದಾಗಿದೆ. ನೀವು ಹೊಸ ಅಥವಾ ಇನ್ಯಾವುದೇ ಕಾರು ಖರೀದಿ ಮಾಡೋಕು ಮೊದ್ಲು ಪಾರ್ಕಿಂಗ್ ಸ್ಪೇಸ್ ಸರ್ಟಿಫಿಕೇಟ್ ಕಡ್ಡಾಯವಾಗಿ ಮಾಡಿಕೊಂಡಿರಬೇಕು. ಹಾಗಿದ್ರೆ ಮಾತ್ರ ನೀವು ಕಾರು ಖರೀದಿಸಲು ಸಾಧ್ಯ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ನಗರಾಭಿವೃದ್ದಿ ಸಚಿವ ವೆಂಕಯ್ಯನಾಯ್ಡು ಮುಂದಿನ ವರ್ಷದಿಂದ ಪಾರ್ಕಿಂಗ್ ಸ್ಪೇಸ್ ಸರ್ಟಿಫಿಕೇಟ್ ಇಲ್ಲದೆ ಕಾರು ಖರೀದಿ ಮಾಡುವಂತಿಲ್ಲ ಎಂದು ತಿಳಿಸಿದ್ದಾರೆ. ಈಗಾಗಲೇ ಈ ಕುರಿತಾಗಿ ಕೇಂದ್ರ ಸಾರಿಗೆ ಸಚಿವರೊಂದಿಗೆ ಸಮಾಲೋಚನೆ ನಡೆಸಿದ್ದು, ರಾಜ್ಯಗಳಿಗೂ ಕೂಡ ಮಾಹಿತಿ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ.
Like us on Facebook The New India Times
ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333
POPULAR STORIES :
ತನ್ನ ಸೆಕ್ಸ್ ಸಿಡಿ ಪ್ರಸಾರ ಮಾಡದಂತೆ ಕೋರ್ಟ್ ಮೊರೆ ಹೋದ ಜೆ.ಟಿ ಪಾಟೀಲ..!
ಸದ್ಯದಲ್ಲೇ ಇಬ್ಬರು ರಾಜಕೀಯ ವ್ಯಕ್ತಿಗಳ ಸಿ.ಡಿ. ರಿಲೀಸ್ : ರಾಜಶೇಖರ ಮುಲಾಲಿ
ಸೀರೆ ಕೊಳ್ಳೋಕೆ ಮುಗಿ ಬಿದ್ರು ಜನ..! ಸೀರೆಯ ಬೆಲೆ ಕೇವಲ 1. ರೂಪಾಯಿ ಮಾತ್ರ..!
ಸತ್ತ ವ್ಯಕ್ತಿಯ ಶವ ಸಂಸ್ಕಾರಕ್ಕೆ ನೀಡ್ತಾ ಇಲ್ಲ ಒಂದಿಡಿ ಜಾಗ..?
ಕನ್ನಡಿಗರಿಗಿಲ್ಲಿದೆ ಶುಭ ಸುದ್ದಿ: ಖಾಸಗಿ ವಲಯದಲ್ಲಿ ಕನ್ನಡಿಗರಿಗೂ ಮೀಸಲಾತಿ