ಖಾಸಗೀ ಆಸ್ಪತ್ರೆಗಳಲ್ಲಿ ಸರ್ಕಾರ ಒಟ್ಟು 100 ಕೋಟಿ ಹಣ ಬಾಕಿ ಉಳಿಸಿಕೊಂಡಿರುವ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ಬಡ ಜನರಿಗೆ ಒದಗಿಸುತ್ತಿದ್ದ ಉಚಿತ ಆರೋಗ್ಯ ಸೇವೆ ಇನ್ಮುಂದೆ ಬಂದ್ ಆಗಲಿವೆ..! ಬಿಪಿಎಲ್ ಕಾರ್ಡ್ ಹೊಂದಿದ ಬಡ ಜನರಿಗೆ ಸರ್ಕಾರ ಕೆಲವು ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಸೇವೆ ನೀಡ್ತಾ ಬಂದಿತ್ತು. ಆದ್ರೆ ಕಳೆದ ಆರು ತಿಂಗಳಿನಿಂದ ಸರ್ಕಾರ 100 ಕೋಟಿ ಹಣ ಬಾಕಿ ಉಳಿಸಿಕೊಂಡಿದ್ದು ಜನವರಿ 16 ರಿಂದ ಫ್ರೀ ಟ್ರೀಟ್‍ಮೆಂಟ್ ನೀಡೋದನ್ನ ಬಂದ್ ಮಾಡಲಿದ್ದೇವೆ ಎಂಬ ಶಾಕ್ ನೀಡಿದೆ. ಸರ್ಕಾರ ಖಾಸಗಿ ಆಸ್ಪತ್ರೆಯಲ್ಲಿ ಒಪ್ಪಂದ ಮಾಡಿಕೊಂಡು ಕೆಲವು ಯೋಜನೆಗಳನ್ನು ಜಾರಿಗೆ ತಂದಿದ್ವು. ಮುಖ್ಯ ಮಂತ್ರಿ ಸಾಂತ್ವಾನ ಹರೀಶ್ ಯೋಜನೆ, ವಾಜಪೇಯಿ ಆರೋಗ್ಯ ಶ್ರೀ, ರಾಜೀವ್ ಆರೋಗ್ಯ ಶ್ರೀ, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ ಯೋಜನೆಯಡಿಯಲ್ಲಿ ಜನರಿಗೆ ಉಚಿತ ಸೇವೆಯನ್ನು ನೀಡುತ್ತಿತ್ತು. ಆದ್ರೆ ಈಗ ಈ ಎಲ್ಲಾ ಯೋಜನೆಗಳು ಸ್ಥಗಿತಗೊಳ್ಳಲಿದೆ. ಕಳೆದ ಆರು ತಿಂಗಳಿನಿಂದ ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ಹಣ ಪಾವತಿ ಮಾಡದೆ ಇರುವುದರಿಂದ ಆಸ್ಪತ್ರೆ ನಿರ್ವಹಣೆಗೆ ತೀವ್ರ ತೊಂದರೆಯುಂಟಾಗುತ್ತಿರೋ ಕಾರಣ ಸರ್ಕಾರ ಉಚಿತ ಸೇವೆ ಯಾಜನೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದೇವೆ ಎಂದು ಒಕ್ಕೂಟದ ಸಹ ಸಂಚಾಲಕ ಡಾ.ಎಸ್.ಸಿ ನಾಗೇಂದ್ರ ಸ್ವಾಮಿ ತಿಳಿಸಿದ್ದಾರೆ.
100 ಕೋಟಿ ಬಾಕಿ..!
ರಾಜ್ಯದ 300 ಖಾಸಗಿ ಆಸ್ಪತ್ರೆಗಳು ಸರ್ಕಾರದ ಜೊತೆ ಒಪ್ಪಂದ ಮಾಡಿಕೊಂಡು ಯೋಜನೆಗಳನ್ನು ಅನುಷ್ಠಾನ ಮಾಡಿಕೊಂಡು ಬಡ ಜನರಿಗೆ ಉಚಿತ ಆರೋಗ್ಯ ಸೇವೆಯನ್ನು ಒದಗಿಸುತ್ತಿದೆ. ಆದರೆ ಸರ್ಕಾರ 100 ಕೋಟಿ ಹಣ ಪಾವತಿ ಮಾಡದೆ ಹಾಗೆ ಉಳಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ. ಇದರಿಂದ ಆಸ್ಪತ್ರೆಯ ಸಿಬ್ಬಂಧಿಗಳ ವೇತನ ಇತ್ಯಾದಿಗಳಿಗೆ ತೀವ್ರ ತೊಂದೆರೆಯಾಗುತ್ತಿದೆ. ಹೀಗಾಗಿ ಸರ್ಕಾರದ ವಾಜಪೇಯಿ ಆರೋಗ್ಯ ಶ್ರೀ, ರಾಜೀವ್ ಆರೋಗ್ಯ ಶ್ರೀ ಮತ್ತು ಜ್ಯೋತಿ ಸಂಜೀವಿನಿ ಸೇವೆಗಳನ್ನು ಸ್ಥಗಿತಗೊಳಿಸಲು ಖಾಸಗಿ ಆಸ್ಪತ್ರೆಗಳು ನಿರ್ಧರಿಸಿದೆ. ಮಕ್ಕಳಿಗೆ ಹಾಗೂ ಅಪಘಾತದಲ್ಲಿ ಗಾಯಗೊಂಡವರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕಾಗಿ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಹಾಗೂ ಮುಖ್ಯಮಂತ್ರಿ ಸ್ವಾಂತ್ವಾನ ಹರೀಶ್ ಯೋಜನೆಯನ್ನು ಸ್ಥಗಿತಗೊಳಿಸಲ್ಲ ಎಂದು ಹೇಳಿದ್ದಾರೆ.
Like us on Facebook The New India Times
ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333
POPULAR STORIES :
ಮತ್ತೆ ಒಂದಾಗಲಿದ್ದಾರೆ ಸುದೀಪ್ ದಂಪತಿ
195 ಬಾರಿ ಪಾರ್ಕಿಂಗ್ ನಿಯಮ ಉಲ್ಲಂಘಿಸಿದ ಕಾರು ಒಂದು ಬಾರಿಯೂ ದಂಡ ಕಟ್ಲಿಲ್ಲ..!
ಗುಡ್ ನ್ಯೂಸ್: ಸದ್ಯದಲ್ಲೆ ಬಡವರ ಖಾತೆಗೆ ನೇರ ಹಣ ಪಾವತಿ..?
ಫಿಲ್ಮ್ ಫೇರ್‍ಗೆ ಸನ್ನಿ ಶಾರ್ಟ್ ಫಿಲ್ಮ್ ! #Sunny Leone Short film
ದಂಪತಿಗಳಿಗೆ ಉಡುಗೊರೆಯಾಗಿ ಕಾಂಡೋಮ್ ನೀಡಲಿದೆ ಸರ್ಕಾರ..!