ಹಲವು ವಿರೋಧಗಳ ನಡುವೆಯೂ ತಮಿಳುನಾಡು ಮುಖ್ಯಮಂತ್ರಿ ಸ್ಥಾನಕ್ಕೇರಲು ಸಿದ್ದತೆ ನಡೆಸಿದ್ದ ಚಿನ್ನಮ್ಮ ಖ್ಯಾತಿಯ ಶಶಿಕಲಾ ನಟರಾಜನ್ ಅವರಿಗೆ ಭಾರಿ ಮುಖಭಂಗವಾಗಿದೆ. ಇಂದು ನಡೆಯಬೇಕಿದ್ದ ಮುಖ್ಯಮಂತ್ರಿ ಪ್ರಮಾಣ ವಚನ ಕಾರ್ಯಕ್ರಮವನ್ನು ತಾತ್ಕಾಲಿಕ ರದ್ದು ಮಾಡಿರುವ ಹಿನ್ನಲೆಯಲ್ಲಿ ಮತ್ತೆ ಸಿಎಂ ಆಗಿ ಪನ್ನೀರ್ ಸೆಲ್ವಂ ಅವರೆ ಕಾರ್ಯ ನಿರ್ವಹಿಸಲಿದ್ದಾರೆ. ತಮಿಳುನಾಡು ರಾಜ್ಯಪಾಲ ವಿದ್ಯಾಸಾಗರ್ ರಾವ್ ಮುಂಬೈಗೆ ಪ್ರಯಾಣ ಬೆಳೆಸಿರುವ ಕಾರಣ ಪ್ರಮಾಣ ವಚನ ಕಾರ್ಯಕ್ರಮವನ್ನು ತಾತ್ಕಾಲಿಕ ರದ್ದುಗೊಳಿಸಲಾಗಿದೆ. ಇನ್ನು ತಮಿಳುನಾಡಿನಲ್ಲಿ ಶಶಿಕಲಾ ಅವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ ನಡೆಯುತ್ತಿರೋದು ಗೊತ್ತಿದ್ದರೂ ಕೂಡ ರಾಜ್ಯಪಾಲರಾದ ವಿದ್ಯಾಸಾಗರ್ ರಾವ್ ಮುಂಬೈ ಪ್ರಯಾಣ ಬೆಳೆಸಿರೊದು ಎಲ್ಲರಲ್ಲೂ ಅನುಮಾನ ಮೂಡಿಸಿದೆ. ಇನ್ನು ಮುಂಬೈಗೆ ತೆರಳಿರುವ ರಾಜ್ಯಪಾಲರು ಚುನಾವಣೆಯಲ್ಲಿ ಗೆಲ್ಲದೆ, ಯಾವುದೇ ರಾಜಕೀಯ ಪಕ್ಷದಲ್ಲಿ ಅನುಭವ ಇಲ್ಲದೆ ಇರುವ ಶಶಿಕಲಾ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರೆ..? ಅಲ್ಲದೆ ಶಶಿಕಲಾ ಅವರ ಮೇಲೆ ಭ್ರಷ್ಟಾಚಾರ ಆರೋಪ ಕೇಳಿ ಬಂದಿದ್ದು ಅದರ ತೀರ್ಪಿನ್ನು ಹೊರ ಬಂದಿಲ್ಲ ಹೀಗಿರುವಾಗ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವುದು ಎಷ್ಟು ಸರಿ..? ಎಂಬ ಕುರಿತಾಗಿ ಕಾನೂನು ಸಲಹೆ ಪಡೆದುಕೊಳ್ಳಲು ಮುಂಬೈಗೆ ತೆರಳಿದ್ದಾರೆ ಎಂಬ ವದಂತಿಗಳು ಕೇಳಿ ಬರ್ತಾ ಇದೆ. ಆದಾಯ ಮೀರಿ ಆಸ್ತಿ ಗಳಿಸಿರುವ ಪ್ರಕರಣದಲ್ಲಿ ಜಯಲಲಿತಾ ಅವರ ಜೊತೆ ಶಶಿಕಲಾ ಅವರ ಹೆಸರೂ ಇದ್ದು, ಮುಂದಿನವಾರದಲ್ಲಿ ಸುಪ್ರೀಂಕೊರ್ಟ್ ತೀರ್ಪು ಹೊರಹಾಕಲಿದೆ.
Like us on Facebook The New India Times
ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333
POPULAR STORIES :
ತಮಿಳಿನ ಪೂಜೈ ರಿಮೇಕ್ ಚಿತ್ರದಲ್ಲಿ ಪುನೀತ್ ಹೀರೋ.
ಸತ್ರೂ ಲವ್ ಮ್ಯಾರೇಜ್ ಆಗಲ್ವಂತೆ ಈ ನಟಿ.
ಹಳ್ಳಿಡಾಕ್ಟ್ರು – ಇವರಿಂದಲೇ ಹಳ್ಳಿಯ ಸೊಗಡು ಇನ್ನು ಉಳಿದಿರೋದು.
ವಿಷ್ಣುದಾದರಿಂದ ಸೂಪರ್‍ಸ್ಟಾರ್ ಆದ್ರಂತೆ ಈ ನಟ..!
ಮ್ಯಾಟ್ರಿಮೋನಿ ವೆಬ್‍ಸೈಟ್‍ಗಳಲ್ಲಿ ನಂಬರ್ ಕೊಡೋಕು ಮುನ್ನ ಈ ಸ್ಟೋರಿನ ಮಿಸ್ ಮಾಡ್ದೆ ಓದಿ