ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೋಹ್ಲಿಗೆ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಬೌಲ್ ಮಾಡಿದ್ದಾರೆ.
ಕ್ಯಾಪ್ಟನ್ ಕೋಹ್ಲಿ ಸೇರಿದಂತೆ ಟೀಂ ಇಂಡಿಯಾದ ಆಟಗಾರರಿಗೆ ಬೌಲಿಂಗ್ ಮಾಡಿರುವ ಅರ್ಜುನ್ ಭವಿಷ್ಯದಲ್ಲಿ ಭಾರತ ಕ್ರಿಕೆಟ್‍ಗೆ ಭರವಸೆ ಆಟಗಾರನಾಗಿ ಲಭ್ಯವಾಗುವೆ ಎಂಬ ನಿರೀಕ್ಷೆಯನ್ನು ಹುಟ್ಟುಹಾಕಿದ್ದಾರೆ.
ನ್ಯೂಜಿಲೆಂಡ್ ವಿರುದ್ಧ ಅಕ್ಟೋಬರ್ 22 ರಂದು ನಡೆಯಲಿರುವ ಏಕದಿನ ಪಂದ್ಯದ ಹಿನ್ನೆಲೆಯಲ್ಲಿ ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆದ ಅಭ್ಯಾಸ ಪಂದ್ಯದಲ್ಲಿ ಅರ್ಜುನ್ ಬೌಲ್ ಮಾಡಿದ್ದಾರೆ.
130-135 ಕಿಮೀ ವೇಗದಲ್ಲಿ ಬೌಲ್ ಮಾಡುವ ಅರ್ಜುನ್ ಕೋಹ್ಲಿ, ಟೀಂ ಇಂಡಿಯಾದ ಕೋಚ್ ರವಿಶಾಸ್ತ್ರಿ ಸೇರಿದಂತೆ ಎಲ್ಲರ ಮನಗೆದಿದ್ದಾರೆ. ಟೀಂ ಇಂಡಿಯಾದ ಆಟಗಾರರಿಗೆ ಅರ್ಜುನ್ ಬೌಲ್ ಮಾಡಿರೋದರ ಫೋಟೋವನ್ನು ಬಿಸಿಸಿಐ ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿ ಶೇರ್ ಮಾಡಿದೆ.