ರಿಯಲ್ ಸ್ಟಾರ್ ಉಪೇಂದ್ರ ಅವರ ಪ್ರಜಾಕೀಯಕ್ಕೆ ಮೈಸೂರು ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಚಾಮರಾಜನಗರದ ಕೊಳ್ಳೆಗಾಲದ ಕುರುಬರಕಟ್ಟೆ ಗ್ರಾಮದಲ್ಲಿ ಶ್ರೀ ಧರೆಗೆ ದೊಡ್ಡವರ ಸಂಸ್ಥಾನ ಮಠದ ಧ್ಯಾನ ಮಂದಿರ ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟಕಕ್ಕೆ ಹೊಸ ಆಲೋಚನೆಗಳು ಬೇಕಿತ್ತು. ಉಪೇಂದ್ರ ಅವರು ಹೊಸ ಆಲೋಚನೆಗಳೊಂದಿಗೆ ಸ್ವತಂತ್ರ ಪಕ್ಷ ಕಟ್ಟಿ ರಾಜಕೀಯ ಪ್ರವೇಶಿಸಿರುವುದು ಒಳ್ಳೆಯದು. ಅವರು ರಾಜ್ಯಕ್ಕೆ ಒಳ್ಳೆಯದನ್ನು ಮಾಡಲಿ ಎಂದರು.