ಇದು ಶಬರಿಮಲೆಗೆ ಹೋಗುವ ಅಯ್ಯಪ್ಪ ಭಕ್ತರಿಗೆ ನಿಜಕ್ಕೂ ಶಾಕಿಂಗ್ ನ್ಯೂಸ್. ಐಸಿಸ್ ಉಗ್ರರು ಶಬರಿಮಲೆಗೆ ತೆರಳುವ ಅಯ್ಯಪ್ಪ ಭಕ್ತರನ್ನು ಕೊಲ್ಲಲು ಸಂಚು ರೂಪಿಸಿದ್ದಾರೆ ಎಂಬ ಆಘಾತಕಾರಿ ಸುದ್ದಿ ಹೊರಬಿದ್ದಿದೆ.
ನೀರು, ಪ್ರಸಾದದಲ್ಲಿ ವಿಷ ಬೆರೆಸಿ ಅಯ್ಯಪ್ಪ ಭಕ್ತರನ್ನು ಕೊಲ್ಲಲು ಐಸಿಸ್ ಉಗ್ರರು ಪ್ಲಾನ್ ಮಾಡಿದ್ದಾರೆ. ರೈಲಿನಲ್ಲಿ ಹಾಗೂ ರೈಲು ನಿಲ್ದಾಣದಲ್ಲಿ ವಿಷ ಮಿಶ್ರಿತ ನೀರನ್ನು ಪೂರೈಸಿ ಭಕ್ತರನ್ನು ಹತ್ಯೆಗೈಯಲು ಉಗ್ರರು ಸಂಚು ಮಾಡಿದ್ದಾರಂ ಗುಪ್ತಚರ ಇಲಾಖೆ ಕೇರಳ ಪೊಲೀಸರಿಗೆ ಮಾಹಿತಿ ನೀಡಿದೆ ಎಂದು ವರದಿಯಾಗಿದೆ.