ದಕ್ಷಿಣ ಆಫ್ರಿಕಾದ ವಿರುದ್ಧ ಫೆಬ್ರವರಿಯಲ್ಲಿ ನಡೆಯಲಿರೋ 6 ಪಂದ್ಯಗಳ ಏಕದಿನ ಸರಣಿಗೆ ವಿಕಾಟ್ ಕೊಹ್ಲಿ ನೇತೃತ್ವದ ಭಾರತ ತಂಡವನ್ನು ಪ್ರಕಟಿಸಲಾಗಿದೆ.
17 ಮಂದಿ ಸದಸ್ಯರ ತಂಡದಲ್ಲಿ ಬ್ಯಾಟ್ಸ್‍ಮನ್ ಕೇದರ್ ಜಾದವ್ ಮತ್ತು ವೇಗಿ ಶಾರ್ದೂಲ್ ಠಾಕೂರ್ ತಂಡಕ್ಕೆ ಮರಳಿದ್ದಾರೆ. ಅನುಭವಿ ಬ್ಯಾಟ್ಸ್‍ಮನ್ ಯುವರಾಜ್ ಸಿಂಗ್, ಸುರೇಶ್ ರೈನಾ ಹಾಗೂ ಸ್ಟಾರ್ ಸ್ಪಿನ್ನರ್ ಗಳಾದ ಆರ್. ಅಶ್ವಿನ್ ಮತ್ತು ರವೀಂದ್ರ ಜಡೇಜಾ ಮತ್ತೆ ಅವಕಾಶ ವಂಚಿತರಾಗಿದ್ದಾರೆ. ಶ್ರೀಲಂಕಾ ವಿರುದ್ಧ ನಡೆಯುತ್ತಿರೋ ಟಿ20 ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರುತ್ತಿರುವ ಕನ್ನಡಿಗ ಕೆ.ಎಲ್ ರಾಹುಲ್ ಅವರನ್ನೂ ಸಹ ಕಡೆಗಾಣಿಸಲಾಗಿದೆ.
ಯಾರೆಲ್ಲಾ ಇದ್ದಾರೆ…?
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಶಿಖರ್ ಧವನ್, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಕೇದರ್ ಜಾದವ್, ಎಂ. ಎಸ್ ಧೋನಿ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಕುಲ್ ದೀಪ್ ಯಾದವ್, ಯುಜ್ವೇಂದ್ರ ಚಹಾಲ್, ಮೊಹಮ್ಮದ್ ಶಮಿ, ಜಸ್ ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಭುವನೇಶ್ವರ್ ಕುಮಾರ್.