ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ಅವರ ಹತ್ಯೆಗೆ ಸಂಚು ರೂಪಿಸಲಾಗಿತ್ತೇ…?
ತಮ್ಮನ್ನು ಎನ್ ಕೌಂಟರ್ ಮೂಲಕ ಹತ್ಯೆ ಮಾಡಲು ಸಂಚು ರೂಪಿಸಲಾಗಿತ್ತು’ ಎಂದು ಸ್ವತಃ ಪ್ರವೀಣ್ ತೊಗಾಡಿಯಾ ಅವರೇ ಹೇಳಿದ್ದಾರೆ.
ನಾಪತ್ತೆಯಾಗಿದ್ದ ತೊಗಾಡಿಯಾ ಅವರು ಜನವರಿ 15ರ ರಾತ್ರಿ ಗುಜರಾತಿನ ಅಹ್ಮದಾಬಾದಿನ ಚಂದ್ರಮಣಿ ಆಸ್ಪತ್ರೆಯಲ್ಲಿ ಪ್ರಜ್ಞಾಹೀನಾ ಸ್ಥಿತಿಯಲ್ಲಿ ಪತ್ತೆಯಾಗಿದ್ರು. ದೇಹದಲ್ಲಿ ಸಕ್ಕರೆ ಪ್ರಮಾಣ ಕಡಿಮೆ ಇದ್ದುದರಿಂದ ಪ್ರಜ್ಞಾಹೀನ ಸ್ಥಿತಿ ತಲುಪಿದ್ರು ಎಂದು ಆಸ್ಪತ್ರೆ ಮೂಲಗಳಿಂದ ತಿಳಿದು ಬಂದಿತ್ತು..
ಚೇತರಿಸಿಕೊಂಡಿರೋ ತೊಗಾಡಿಯಾ ಅವರು ಸುದ್ದಿಗೋಷ್ಠಿ ನಡೆಸಿ ಹೊಸ ಬಾಂಬ್ ಸಿಡಿಸಿದ್ದಾರೆ.
10 ವರ್ಷದ ಹಿಂದಿನ ಪ್ರಕರಣದಲ್ಲಿ ತನ್ನನ್ನು ಸಿಲುಕಿಸಿ, ಧ್ವನಿ ಅಡಗಿಸೋ ಪ್ರಯತ್ನ ನಡೀತಿದ್ದು, ರಾಜಸ್ಥಾನಿ ಪೊಲೀಸ್ರು ತನ್ನ ಬಂಧಿಸಲು ಬಂದಿದ್ರು. ಎನ್ ಕೌಂಟರ್ ಮೂಲಕ ಹತ್ಯೆಗೈಯಲು ಸಂಚು ರೂಪಿಸಲಾಗಿದೆ…! ಇದನ್ನು ತನಗೆ ಆತ್ಮೀಯರೊಬ್ಬರು ತಿಳಿಸಿದ್ದಾರೆ ಎಂಬ ಆಘಾತಕಾರಿ ವಿಷಯವನ್ನು ತೊಗಾಡಿಯಾ ಹೇಳಿಕೊಂಡಿದ್ದಾರೆ.