ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ಕ್ಷೇತ್ರದ ಶಾಸಕ ಹಾಗೂ ಕೆಎಂ.ಎಫ್ ಅಧ್ಯಕ್ಷ ಎಂ.ಪಿ ರವಿಂದ್ರ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ರವಿಂದ್ರರವರು ಸುತ್ತೂರು ಜಾತ್ರೆಯಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದರು. ಜನವರಿ17 ರಂದೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರನ್ನು ಇಂದು ಬೇರೆ ಪ್ರತಿಷ್ಟಿತ ಆಸ್ಪತ್ರೆಗೆ ದಾಖಲಿಸಲಾಗಿದೆ.