ಧಾರವಾಡ ಜಿಲ್ಲೆಯ ಅಣ್ಣಿಗೇರಿಯಲ್ಲಿ ತಲೆ ಬುರುಡೆಳು ಪತ್ತೆಯಾಗಿ ದೇಶಾದ್ಯಂತ ಸಂಚಲನ ಉಂಟಾಗಿತ್ತು. ಇದೀಗ ಸಾಂಸ್ಕೃತಿಕ ನಗರಿಯಲ್ಲೂ ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿದೆ. ಮೈಸೂರಿನ ವಿಜಯನಗರದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮನುಷ್ಯರ ತಲೆ ಬುರುಡೆಗಳು ಪತ್ತೆಯಾಗಿವೆ.

ಚೀಲದಲ್ಲಿ 13 ತಲೆ ಬುರುಡೆಗಳನ್ನು ತಂದು ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಇವನ್ನು ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.ತಲೆ ಬುರುಡೆಗಳನ್ನು ನೋಡಲು ಜನರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ. ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.