ನಡೆದಾಡುವ ದೇವರು. ಶತಾಯುಷಿ ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಹಿರಿಯ ಸ್ವಾಮೀಜಿ ಡಾ. ಶ್ರೀ ಶಿವಕುಮಾರ ಸ್ವಾಮಿಗಳ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದಿದ್ದು, ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ವಾಮೀಜಿಯವರು ಶೀತ, ಕಫ, ಜ್ವರದಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ. ಗುರುವಾರ ಸಂಜೆಯಿಂದಲೇ ಜ್ವರ ಕಾಣಿಸಿಕೊಂಡಿದೆ. ಆದರೂ ಇಷ್ಟಲಿಂಗ ಪೂಜೆಯನ್ನು ನೆರವೇರಿಸಿದ್ದಾರೆಂದು ಮೂಲಗಳು ತಿಳಿಸಿವೆ.