ಚಲಿಸುತ್ತಿದ್ದ ಬಿಎಂಟಿಸಿ ಬಸ್ ನಲ್ಲೇ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಕೋನಪ್ಪನ ಅಗ್ರಹಾರದಲ್ಲಿ ನಡೆದಿದೆ.
ಹತ್ಯೆಯಾದ ವ್ಯಕ್ತಿ ಆಂಧ್ರಪ್ರದೇಶ ಮೂಲದ ವ್ಯಕ್ತಿ ಎಂದು ಗುರುತಿಸಲಾಗಿದೆ. ಸುಮಾರು 32 ವರ್ಷದ ಈ ವ್ಯಕ್ತಿ ಅತ್ತಿಬೆಲೆ ಕಡೆಯಿಂದ ಬರುತ್ತಿದ್ದ ಎನ್ನಲಾಗಿದೆ. ಈತನನ್ನು ಅಲ್ಲಿಂದಲೂ ಆ ವ್ಯಕ್ತಿಯನ್ನು ಹಿಂಬಾಲಿಸಿಕೊಂಡು ಬಂದ ಮೂವರು ಅಪರಿಚಿತರು ಎಲೆಕ್ಟ್ರಾನಿಕ್ ಸಿಟಿ ಸಮೀಪದ ಕೋನಪ್ಪನ ಅಗ್ರಹಾರದಲ್ಲಿ ಬಸ್ಸೊಳಗೆ ನುಗ್ಗಿ ಕೊಲೆ ಮಾಡಿದ್ದಾರೆ. ಆರೋಪಿಗಳಲ್ಲಿ ಓರ್ವ ಸುಮಾರು 60ರ ವೃದ್ಧ ಹಾಗೂ ಇನ್ನಿಬ್ಬರು 30ರ ಆಸುಪಾಸಿನವರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.