ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದ ನಿರ್ಭಯ ಪ್ರಕರಣವನ್ನೇ ಹೋಲುವ ಮತ್ತೊಂದು ಅಮಾನವೀಯ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
28 ವರ್ಷ ಬುಡಕಟ್ಟು ಸಮುದಾಯಕ್ಕೆ ಸೇರಿದ ಮಹಿಳೆ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿ, ಆಕೆಯ ಗುಪ್ತಾಂಗಕ್ಕೆ ರಾಡೊಂದನ್ನು ತೂರಿದ್ದಾರೆ ಎಂದು ವರದಿಯಾಗಿದೆ. ಸಂತ್ರಸ್ತೆ ಮಾನಸಿಕ ಅಸ್ವಸ್ಥೆ ಎಂದು ತಿಳಿದುಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಂಪ್ರಬೆಶ್ ಶರ್ಮಾ (45) , ಅಂಧಾರು ಬರ್ಮನ್ (50) ಎಂಬಿಬ್ಬರನ್ನು ಬಂಧಿಸಿರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸಂತ್ರಸ್ತೆ ಫೆಬ್ರವರಿ 18 ರಂದು ಪ.ಬಂಗಾಳದ ದಿನಜಪೋರ್ ಜಿಲ್ಲೆಯ ಕಶ್ಮುಂಡಿ ಪ್ರದೇಶದಲ್ಲಿ ಉತ್ಸವವೊಂದನ್ನು ಮುಗಿಸಿಕೊಂಡು ವಾಪಾಸ್ಸಾಗುವಾಗ ಕಾಮುಕರು ಈ ಕೃತ್ಯ ಎಸಗಿದ್ದಾರೆ. ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸಾವು ಬದುಕಿನ ಹೋರಾಟ ನಡೆಸುತ್ತಿದ್ದಾರೆ.