ನಟಿ ಶ್ರೀದೇವಿ ಅವರ ನಿಧನದ ಸುದ್ದಿ ಕೇಳಿ ಇಡೀ ಭಾರತ ಆಘಾತಕ್ಕೆ ಒಳಗಾಗಿದೆ. ನಟ-ನಟಿಯರು, ಗಣ್ಯರು ಸಂತಾಪ ಸೂಚಿಸಿದ್ದಾರೆ. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಕೂಡ ಸಂತಾಪ ಸೂಚಿಸಿ ಟ್ವೀಟ್ ಮಾಡಿದೆ.

ಕಾಂಗ್ರೆಸ್ ಟ್ವೀಟ್ ನಲ್ಲಿ ‘ ಶ್ರೀದೇವಿ ಅವರ ನಿಧನಕ್ಕೆ ವಿಷಾಧಿಸುತ್ತೇವೆ. ಅವರು ಅತ್ಯುತ್ತಮ ನಟಿ, ಅವರು ತಮ್ಮ ಹೃದಯದಲ್ಲಿ ಎಂದೆಂದಿಗೂ ನೆಲೆಸಿರುತ್ತಾರೆ. ಅವರ ಪ್ರೀತಿಪಾತ್ರರಿಗೆ ನಮ್ಮ ಸಂತಾಪ. ಅವರಿಗೆ 2013ರಲ್ಲಿ ಯುಪಿಎ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿತ್ತು’ ಎಂದಿದೆ.
ಅದಕ್ಕೆ ಜನಾಕ್ರೋಶ ವ್ಯಕ್ತವಾಗಿದೆ. ಕಾಂಗ್ರೆಸ್ ಸಾವಿನಲ್ಲೂ ರಾಜಕೀಯ ಮಾಡುತ್ತಿದೆ ಎಂದು ನೆಟ್ಟಿಗರು ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.








