ಮಲ್ಲಿಕಾರ್ಜುನ ಬಂಡೆ ಮಕ್ಕಳನ್ನು ದತ್ತು ಪಡೆದ ಅಮಿತ್ ಶಾ…!

Date:

ಹುತಾತ್ಮ ಪಿಎಸ್ ಐ ಮಲ್ಲಿಕಾರ್ಜುನ ಬಂಡೆ ಅವರ ಇಬ್ಬರು ಮಕ್ಕಳಾದ ಶಿವಾನಿ ಹಾಗೂ ಸಾಯಿಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ದತ್ತು ಪಡೆದಿದ್ದಾರೆ.


ಕಲಬುರಗಿಯ ಸೇಡಂ ರಸ್ತೆಯ ಇಎಸ್ ಐ ಆಸ್ಪತ್ರೆಯ ಆಡಿಟೋರಿಯಂ ನಲ್ಲಿ ನಡೆದ ಬಿಜೆಪಿ ವಿಭಾಗೀಯ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ , ಬಂಡೆ‌ ಮಕ್ಕಳ ಪರಿಸ್ಥಿತಿ ಬಗ್ಗೆ ಹೇಳಿದರು. ಸರ್ಕಾರ ತಿಂಗಳಿಗೆ ಕೇವಲ 1 ಸಾವಿರ ರೂ ಮಾತ್ರ ನೀಡುತ್ತಿದೆ. ಇದರಿಂದ ಶಿಕ್ಷಣಕ್ಕೆ ತೊಂದರೆ ಆಗುತ್ತದೆ ಎಂದು ಪರಿಸ್ಥಿತಿಯ ಬಗ್ಗೆ ಮರುಕ‌ಪಟ್ಟರು.


ಬಳಿಕ ಕೂಡಲೇ ಸ್ಪಂದಿಸಿದ ಅಮಿತ್ ಶಾ ಮಕ್ಕಳ ಸಂಪೂರ್ಣ ವೆಚ್ಚವನ್ನು ಬಿಜೆಪಿಯೇ ಭರಿಸುವುದು. ಹಾಗೂ ಈ ಇಬ್ಬರು ಮಕ್ಕಳನ್ನು ದತ್ತು ಪಡೆಯುವುದಾಗಿ ತಿಳಿಸಿದರು. ಮಲ್ಲಿಕಾರ್ಜುನ ಬಂಡೆಯವರು 2014 ಜನವರಿ 8 ರಂದು ಶಾರ್ಪ್ ಶೂಟರ್ ಮುನ್ನಾ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಗುಂಡೇಟು ತಿಂದು ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದರು.

Share post:

Subscribe

spot_imgspot_img

Popular

More like this
Related

ಕಾಂಟ್ರವರ್ಸಿಗೆ ಬ್ರೇಕ್ ಹಾಕಿದ ರಶ್ಮಿಕಾ – ವಿಜಯ್ !

ಕಾಂಟ್ರವರ್ಸಿಗೆ ಬ್ರೇಕ್ ಹಾಕಿದ ರಶ್ಮಿಕಾ - ವಿಜಯ್ ! ನಟಿ ರಶ್ಮಿಕಾ ಮಂದಣ್ಣ...

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಕೃಷ್ಣ ಬೈರೇಗೌಡ 

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು:...

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ ಟೀಕೆ

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ...

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು!

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು! ಹೆಚ್ಚಿನವರಿಗೆ ಮಧ್ಯಾಹ್ನ ಚಿಕ್ಕನಿದ್ರೆ ಅಥವಾ...