ಮೂರು ವರ್ಷದ ಬಾಲಕಿ ತಲೆ ಮೇಲೆ ಕಲ್ಲು ಹಾಕಿ ಬರ್ಬರವಾಗಿ ಕೊಲೆಗೈದಿರುವ ಘಟನೆ ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೂಲಿ ಕೆಲಸಕ್ಕೆಂದು ಉತ್ತರ ಪ್ರದೇಶದಿಂದ ಬೆಂಗಳೂರಿಗೆ ಬಂದಿದ್ದ ದಂಪತಿಯ ಪುತ್ರಿ ಮೃತೆ. ಈಕೆ ನಿನ್ನೆ ರಾತ್ರಿ ಕಾಣಿಯಾಗಿದ್ದಳು. ಇಂದು ಮುಂಜಾನೆ ಮೃತಪಟ್ಟಿದ್ದಾಳೆ. ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿಹಾಕಿ ಸಾಯಿಸಿದ್ದಾರೆ. ಅತ್ಯಾಚಾರ ಎಸಗಿ ಕೊಂದಿರುವ ಶಂಕೆ ಇದೆ.