ಜನಪ್ರಿಯ ನಟ ಹಾಗೂ ರಾಜಕಾರಣಿ ಮುಖ್ಯಮಂತ್ರಿ ಚಂದ್ರು ಅವರ ಪುತ್ರ ಶರತ್ ನಾಯಕ ನಟನಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಡ್ತಿದ್ದಾರೆ.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ರನ್ನ ಸಿನಿಮಾದಲ್ಲಿ ಶರತ್ ಸಣ್ಣಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದರು. ದಿ ವಿಲನ್ ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದನ್ನು ನಿಭಾಯಿಸಿದ್ದಾರೆ.
ವಿನಯ್ ಭಾರದ್ವಾಜ್ ಅವರು ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಇದು ಇವರ ನಿರ್ದೇಶನದ ಮೊದಲ ಸಿನಿಮಾ. ಹಿತ ಚಂದ್ರಶೇಖರ್ ಚಿತ್ರದ ನಾಯಕಿ.