ವ್ಯಕ್ತೊಯೋರ್ವ ಲೋಕಾಯುಕ್ತ ನ್ಯಾಯಮೂರ್ತಿಗಳಿಗೆ ಚಾಕು ಇರಿದ ಆಘಾತಕಾರಿ ಘಟನೆ ನಡೆದಿದೆ. ಬೆಂಗಳೂರಿನ ಅಂಬೇಡ್ಕರ್ ರಸ್ತೆಯಲ್ಲಿನ ಲೋಕಾಯುಕ್ತ ಕಚೇರಿಯಲ್ಲಿಯೇ ಈ ಘಟನೆ ನಡೆದಿದೆ.
ವಿಚಾರಣೆ ವೇಳೆ ತೇಜಸ್ ಶರ್ಮಾ ಎಂಬ ವ್ಯಕ್ತಿ ಏಕಾಏಕಿ ಲೋಕಾಯಕ್ತ ವಿಶ್ವನಾಥ್ ಶೆಟ್ಟಿ ಅವರ ಮೇಲೆ ದಾಳಿ ಮಾಡಿ ಮೂರು ಬಾರಿ ಚಾಕುನಿಂದ ಇರಿದಿದ್ದು, ಆರೋಪಿಯನ್ನು ವಿಧಾನಸೌದ ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ವಿಶ್ವನಾಥ್ ಶೆಟ್ಟಿ ಅವರನ್ನು ಖಾಸಗಿ ಆಸ್ಪಗೆ ದಾಖಲಿಸಲಾಗಿದೆ.