ಕಾಮುಕನೊಬ್ಬನಿಂದ ಅತ್ಯಾಚಾರಕ್ಕೆ ಒಳಗಾಗುವುದನ್ನು ತಪ್ಪಿಸಿಕೊಳ್ಳಲು ಬಾಲಕಿಯೊಬ್ಬಳು ನಾಲ್ಕಂತಸ್ತಿನಿಂದ ಕೆಳಗೆ ಜಿಗಿದ ಘಟನೆ ಮುಂಬೈಯಲ್ಲಿ ನಡೆದಿದ್ದು , ವೀಡಿಯೋ ವೈರಲ್ ಆಗಿದೆ.
ವ್ಯಕ್ತಿಯೊಬ್ಬ 12ವರ್ಷದ ಬಾಲಕಿಯನ್ನು ನಂಬಿಸಿ ನಿರ್ಮಾಣ ಹಂತದಲ್ಲಿದ್ದ ನಾಲ್ಕಂತಸ್ತಿನ ಕಟ್ಟಡಕ್ಕೆ ಕರೆದೊಯ್ದಿದ್ದಾನೆ. ಅಲ್ಲಿ ಆಕೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆತನಿಂದ ತಪ್ಪಿಸಿಕೊಂಡ ಬಂದ ಬಾಲಕಿ ಕಟ್ಟಡದಿಂದ ಕೆಳಗೆ ಧುಮುಕಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ. ಅಪರಿಚಿತ ಆರೋಪಿ ಪರಾರಿಯಾಗಿದ್ದು, ಆತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪತ್ತೆಗೆ ಹುಡುಕಾಟ ನಡೆದಿದೆ.
ಕಾಮುಕನಿಂದ ತಪ್ಪಿಸಿಕೊಳ್ಳಲು ನಾಲ್ಕಂತಸ್ತಿನ ಕಟ್ಟಡದಿಂದ ಜಿಗಿದ ಬಾಲಕಿ…!
Date: