ಬಿಗ್ ಬಾಸ್ ಮನೆಯಲ್ಲಿ ಆತ್ಮೀಯರಾಗಿದ್ದ ಚಂದನ್ ಶೆಟ್ಟಿ ಮತ್ತು ಶ್ರುತಿ ಪ್ರಕಾಶ್ ಮತ್ತೆ ಒಂದಾಗಿದ್ದಾರೆ.
ತಮ್ಮದೇ ಕೆಲಸದಲ್ಲಿ ಬ್ಯುಸಿಯಾಗಿದ್ದ ಇವರಿಬ್ಬರು ಬಿಗ್ ಬಾಸ್ ಬಳಿಕ ಒಟ್ಟಿಗೆ ಕಾಣಿಸಿಕೊಂಡಿರಲಿಲ್ಲ. ಇದೀಗ ಚಂದನ್ ಮತ್ತು ಶ್ರುತಿ ಪ್ರಕಾಶ್ ಒಂದೇ ಹಾಡಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಇವರಿಬ್ಬರ ಕಾಂಬಿನೇಶನ್ ನಲ್ಲಿ ಹೊಸ ಸಾಂಗ್ ಬರುತ್ತಿದೆ. ಚಂದನ್ ಜೊತೆಗಿರುವ ಫೋಟೊ ವನ್ನು ಇನ್ಸ್ಟ್ರಾಗ್ರಾಮ್ ನಲ್ಲಿ ಹಾಕಿ ಖುಷಿ ಹಂಚಿಕೊಂಡಿದ್ದಾರೆ ಶ್ರುತಿ.