ಉತ್ತರ ಪ್ರದೇಶ ಹಾಗೂ ಜಮ್ಮುಕಾಶ್ಮೀರದ ಕಥುವಾ ಪ್ರದೇಶದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದ್ದಾರೆ. ಅತ್ಯಾಚಾರಿಗಳಿಗೆ ಉಳಿಗಾಲವಿಲ್ಲ ಎಂದು ಹೇಳಿದ್ದಾರೆ.
ಆರೋಪಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿರುವ ಅವರು, ಇಂತಹ ಅಮಾನವೀಯ ಘಟನೆಗಳನ್ನು ಕೆಂಪುಕೋಟೆ ಮೇಲೆ ನಿಂತು ಯುವಕರನ್ನು ಪ್ರಶ್ನಿಸುವ ಧೈರ್ಯ ತಮಗುಂಟು. ಆದ್ರೆ ಸಮಾಜದಲ್ಲಿ ಸಾಮಾಜಿಕ ಮೌಲ್ಯ,ಕುಟುಂಬ ಸಂದರ್ಭಗಳನ್ನು ಬಲಪಡಿಸೋ ಅಗತ್ಯವಿದೆ. ಅಂಬೇಡ್ಕರ್ ಅವರ ಕನಸಿನ ಭಾರತವನ್ನು ನಿರ್ಮಾಣ ಮಾಡಲು ಇದರಿಂದ ಸಾಧ್ಯಮ ಆದರೆ, ಇಂತಹ ಘಟನೆಗಳು ಮನೋಬಲ ಕದಲಿಸುತ್ತವೆ ಎಂದು ಸರಣಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.