ಕಾಶ್ಮೀರದ ಕಥುವಾದಲ್ಲಿ ನಡೆದಿರುವ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಲ್ಲಿರುವ ಬೆನ್ನಲ್ಲೇ ಮತ್ತೊಂದು ಅಂತಹ ಘಟನೆ ನಡೆದಿದೆ.
ಕಾಮುಕನೋರ್ವ ಉತ್ತರಪ್ರದೇಶ ಲಖನೌನಲ್ಲಿ ಮದುವೆಗೆ ತೆರಳಿದ್ದ ಬಾಲಕಿಯನ್ನು ಹೊತ್ತೊಯ್ದಿದ್ದು, ನಂತರ ಆಕೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾನೆ.
ಬಾಲಕಿ ತನ್ನ ಕುಟುಂಬಸ್ಥರೊಂದಿಗೆ ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದಳು. ಈ ವೇಳೆ ಆರೋಪಿ ಸೋನು ಬಾಲಕಿಯನ್ನು ಕಟ್ಟಡವೊಂದಕ್ಕೆ ಹೊತ್ತೊಯ್ದ ಕಾಮುಕ ಆಕೆ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದಿದ್ದಾನೆ.
ಹಲವು ಗಂಟೆಗಳಾದರೂ ಬಾಲಕಿ ಕಾಣದೇ ಹೋದ್ದರಿಂದ ಗಾಬರಿಗೊಂಡ ಪೋಷಕರು ಹುಡುಕಾಟ ಆರಂಭಿಸಿದ್ದಾರೆ. ಈ ವೇಳೆ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ಸಂಬಂಧ ಆರೋಪಿಯನ್ನು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.