ರಾಜ್ಯದಲ್ಲಿ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರ ತೊಡಗಿದೆ. ಪ್ರಚಾರ ಕಾರ್ಯ ಜೋರಾಗಿ ನಡೆಯುತ್ತಿದೆ.
ನಾವಣಾ ಆಯೋಗ ಪ್ರಚಾರ ಕಾರ್ಯದ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಅಪ್ಪಿ ತಪ್ಪಿ ಎಲ್ಲಿಯಾದರೂ ಮಕ್ಕಳ ಬಳಕೆಯಾದಲ್ಲಿ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. 100-200ರೂ ಕೊಟ್ಟರೆ ಸಾಕು ಮಕ್ಕಳು ಪ್ರಚಾರಕ್ಕೆ ಬರುತ್ತಾರೆ ಎಂದು ಅಭ್ಯರ್ಥಿಗಳು , ಬೆಂಬಲಿಗರು ಮಕ್ಕಳನ್ನು ಪ್ರಚಾರಕ್ಕೆ ಬಳಸಿಕೊಳ್ತಾರೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ಮಕ್ಕಳೂ ಸಹ ಸುಲಭದಲ್ಲಿ ಸಿಗುತ್ತಾರೆ.
ಕೇಂದ್ರ ಚುನಾವಣಾ ಆಯೋಗ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು,ಮಕ್ಕಳನ್ನು ಪ್ರಚಾರ ಕಾರ್ಯಕ್ಕೆ ಬಳಸಿಕೊಳ್ಳದಂತೆ ಎಲ್ಲಾ ಪಕ್ಷಗಳಿಗೂ ಖಡಕ್ ವಾರ್ನಿಂಗ್ ಮಾಡಿದೆ.
ಮಕ್ಕಳನ್ನು ಚುನಾವಣಾ ಕಾರ್ಯಕ್ಕೆ ಬಳಸುವುದನ್ನು ತಡೆಯಬೇಕು ಎಂದು ಮಕ್ಕಳ ಆಯೋಗವು ಚುನಾವಣಾ ಆಯೋಗಕ್ಕೆ ಪತ್ರವೊಂದನ್ನು ಬರೆದಿದೆ. ಮಕ್ಕಳ ಕೈಯಲ್ಲಿ ಪಕ್ಷದ ಬಾವುಟ , ಬ್ಯಾನರ್, ಬ್ರೋಷರ್ ಹಿಡಿಸುವುದು, ಕರಪತ್ರ ಹಂಚಿಸುವ ಕಾರ್ಯ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಪಷ್ಟವಾಗಿ ಸೂಚಿಸಿದೆ.ಇದನ್ನು ರಾಷ್ಟ್ರೀಯ ಮಕ್ಕಳ ಆಯೋಗದ ಅಧ್ಯಕ್ಷೆ ಕೃಪಾ ಆಳ್ವಾ ತಿಳಿಸಿದ್ದಾರೆ.