ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇರನೇಮಕಾತಿ ಪಡೆದಿರುವ ಬೆಂಗಳೂರು ಮೂಲದ ಹಿರಿಯ ವಕೀಲೆ ಇಂದೂ ಮಲ್ಹೋತ್ರ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರ ಅವರು ಮಲ್ಹೋತ್ರ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ದೇಶದ ನ್ಯಾಯಾಂಗ ಇತಿಹಾಸದಲ್ಲಿ ವಕೀಲೆಯೊಬ್ಬರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇರವಾಗಿ ನೇಮಕಗೊಳ್ಳುತ್ತಿರೋದು ಇದೇ ಮೊದಲು. ಸಾಮಾನ್ಯವಾಗಿ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ಬಡ್ತಿ ನೀಡಲಾಗುತ್ತದೆ.
ಇಂದೂ ಅವರು 1983 ರಿಂದ ವಕೀಲೆಯಾಗಿ ಕಾರ್ಯ ನಿರ್ವಹಿಸುತ್ತಿದ್ದು, 1988ರಲ್ಲಿ ಸುಪ್ರೀಂಕೋರ್ಟ್ ವಕೀಲೆಯಾಗಿ ಪ್ರವೇಶ ಪಡೆದಿದ್ದರು.