ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಬಿ ಎಸ್ ಯಡಿಯೂರಪ್ಪ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.
ರೈತರು ಹಾಗೂ ದೇವರ ಹೆಸರಿನಲ್ಲಿ ಬಿಎಸ್ ವೈ ರಾನಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ವಜುಭಾಯಿವಾಲ ಪ್ರಮಾಣವಚನ ಬೋಧಿಸಿದರು.
ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನ ನೀಡಿದ್ದು, 10 ದಿನಗಳಲ್ಲಿ ಬಹುಮತ ಸಾಬೀತುಪಡಿಸಬೇಕಿದೆ.