ರಾಜ್ಯದಲ್ಲಿ ಈಗಾಗಲೇ ಮಳೆಯಾಗಿದೆ. ಇಂದು ಸಹ ರಾಜ್ಯ ಸೇರಿದಂತೆ ದೇಶದ ನಾನಾ ಕಡೆಗಳಲ್ಲಿ ಭಾರಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಗಂಟೆಗೆ 80 ಕಿಮೀಗಿಂತಲೂ ಹೆಚ್ಚಿನ ವೇಗದಲ್ಲಿ ಗಾಳಿ ಬೀಸಲಿದ್ದು, ಭಾರಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಗುರುಗ್ರಾಮ, ಫರೀದಾಬಾದ್, ಹರಿಯಾಣ, ದೆಹಲಿ, ಚಂಡಿಗಢ, ಆಂಧ್ರಪ್ರದೇಶ, ಕರ್ನಾಟಕಣ ತಮಿಳುನಾಡು, ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಎಚ್ಚರಿಸಿದೆ.