ಖಾಸಗಿ ವಾಹಿನಿಯ ಕಾರ್ಯಕ್ರಮ ನಿರೂಪಕ ಚಂದನ್ (34) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಗ್ರಾಮದ ಬಳಿ ನಿಂತ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಚಂದನ್ ಹಾಗೂ ಯುವತಿಯೊಬ್ಬರು ಮೃತಪಟ್ಟಿದ್ದು, ಇಬ್ಬರಿಗೆ ಗಾಯಗಳಾಗಿವೆ. ರಾಮು ಮತ್ತು ಸುನೀತ ಗಾಯಗೊಂಡವರೆಂದು ತಿಳಿದು ಬಂದಿದೆ.
ಹನಗವಾಡಿಯ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಈ ಘಟನೆ ಸಂಭವಿಸಿದೆ. ಚಂದನ್ ಸ್ಪಷ್ಟ ಕನ್ನಡ ನಿರೂಪಣೆಗೆ ಹೆಸರುವಾಸಿಯಾಗಿದ್ದರು.