ಕೇಂದ್ರಿಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ ಇ) 10ನೇ ತರಗತಿಯ ಪರೀಕ್ಷಾ ಫಲಿತಾಂಶ ಇಂದು ಸಂಜೆ 4 ಗಂಟೆಗೆ ಪ್ರಕಟವಾಗಲಿದೆ.
ಈ ಬಾರಿ ದಿಲ್ಲಿ-ಎನ್ ಸಿ ಆರ್ , ಹರಿಯಾಣ ಮತ್ತು ಜಾರ್ಖಂಡ್ ರಾಜ್ಯಗಳಲ್ಲಿ ಗಣಿತ ಪ್ರಶ್ನೆಪತ್ರಿಕೆ ಸೋರಿಕೆಯಾಗಿ ಆಕ್ರೋಶಕ್ಕೆ ಕಾರಣವಾಗಿತ್ತು.
ಆದರೆ, ವಿದ್ಯಾರ್ಥಿಗಳ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಮರುಪರೀಕ್ಷೆ ನಡೆಸದಿರಲು ಮಾನನ ಸಂಪನ್ಮೂಲ ಇಲಾಖೆ ನಿರ್ಧರಿಸಿತ್ತು. ಮಂಡಳಿಯು ನಿರಂತರ ಮತ್ತು ಸಮಗ್ರ ಮೌಲ್ಯಮಾಪನವನ್ನು ರದ್ದುಪಡಿಸಿ ಮಂಡಳಿ ಪರೀಕ್ಷೆಯನ್ನು ಮರು ಆರಂಭಿಸುವ ನಿರ್ಧಾರ ತೆಗೆದುಕೊಂಡ ಬಳಿಕ ನಡೆದ ಮೊದಲ ಪರೀಕ್ಷೆ ಇದಾಗಿದೆ. ಈ ಬಾರಿ 16 ,ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಸಿಬಿಎಸ್ ಇ ಪರೀಕ್ಷೆ ಬರೆದಿದ್ದಾರೆ.