ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳ ನಡುವೆ ನಡೆಯುತ್ತಿರುವ ಸಮರ ತಾರಕಕ್ಕೇರಿದ್ದು, ಇತ್ತೀಚೆಗಷ್ಟೇ ಸುದೀಪ್ ಜಗಳ ನಿಲ್ಲಿಸುವಂತೆ ಮನವಿ ಮಾಡಿದ್ದರು. ಇದೀಗ ಯಶ್ ಕೂಡ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.
ಎಲ್ಲಾರಿಗೂ ನಮಸ್ಕಾರ…
ಸಾಮಾಜಿಕ ಜಾಲತಾಣದಲ್ಲಿ ಈಗ ನಡೆಯುತ್ತಿರೋ ಬೆಳವಣಿಗೆ ಒಳ್ಳೆಯದಲ್ಲ. ಕೆಲವು ಕಮೆಂಟ್ಸ್ ಗಳನ್ನೂ ನಾನು ಗಮನಿಸಿದ್ದೇನೆ. ಸುದೀಪ್ ಅವರು ನನಗಿಂತ ಹಿರಿಯರು. ಅವರಿಗೆ ಗೌರವ ಕೊಡಲಿಲ್ಲ ಅಂದ್ರೆ, ನನಗೂ ನೀವು ಗೌರವ ಕೊಡದಂತೆಯೇ. ಘನತೆಯಿಂದ ವರ್ತಿಸಿ, ಇದನ್ನ ದೊಡ್ಡದು ಮಾಡಬೇಡಿ. ನಾನು ಸಾರ್ ಅಂತ ಕರೆದರೆ ಮಾತ್ರ ಅವರಿಗೆ ಗೌರವ ಕೊಟ್ಟ ಹಾಗಲ್ಲ. ಅಥವಾ ನಾನು ಸಾರ್ ಅಂತ ಕರೆಯದೇ ಇದ್ರೂ ಅವರ ಮೇಲಿನ ಗೌರವ ಕಮ್ಮಿಯಾಗಲ್ಲ. ನಾನು ಅವರನ್ನ ತುಂಬಾ ಗೌರವಿಸುತ್ತೇನೆ. ನನ್ನ ಮೇಲಿನ ಅಭಿಮಾನ ತೋರಿಸಿಕೊಳ್ಳುವುದಕ್ಕಾಗಿ ಅವರನ್ನ ಅಗೌರವದಿಂದ ಕಾಣೋದು ಸರಿಯಲ್ಲ. ದಯವಿಟ್ಟು ಇದನ್ನ ಇಲ್ಲಿಗೆ ಬಿಡಿ ಎಂದು ಯಶ್ ಮನವಿ ಮಾಡಿದ್ದಾರೆ.
— Yash (@NimmaYash) June 7, 2018