ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹೆಸರಲ್ಲಿ ತೆರೆದಿರುವ ಫೇಕ್ ಅಕೌಂಟ್ ನಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಗಳನ್ನು ಹಾಕಲಾಗುತ್ತಿದೆ.
ಸಿಎಂ ಅವರನ್ನು ಟಾರ್ಗೆಟ್ ಮಾಡಿ ಪೋಸ್ಟ್ ಹಾಕುತ್ತಿರುವುದನ್ನು ವಿರೋಧಿಸಿ ಅಖಿಲ ಕರ್ನಾಟಕ ಎಚ್ ಡಿಕೆ ಅಭಿಮಾನಿಗಳ ಸೇವಾ ಸಂಘ ದೂರು ನೀಡಿದೆ.
ಈ ಸಲ ಕಪ್ಪು ನಮ್ದೆ ಕಪ್ಪು ನಮ್ದೆ ಅಂತಿದ್ದವ್ರು, ಆ ಕಪ್ಪು ಇದು ಅಂತ ಹೇಳೋಕೇನಾಗಿತ್ರೋ ಎಂದು ಕುಮಾರಸ್ವಾಮಿ ಅವರನ್ನು ಟಾರ್ಗೇಟ್ ಮಾಡಿ ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆ. ಸದ್ಯ ಸಿಎಂ ಕುಮಾರಸ್ವಾಮಿ ಅಭಿಮಾನಿಗಳು ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಅವರಿಗೆ ದೂರು ನೀಡಿದ್ದಾರೆ.