ಬಿಡುವು ನೀಡಿದ್ದ ವರುಣ ಮತ್ತೆ ರಾಜ್ಯದಲ್ಲಿ ಆರ್ಭಟಿಸಲು ಸಿದ್ಧನಾಗಿದ್ದಾನೆ. ರಾಜ್ಯದಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಗಾಳಿ ಸಹಿತ ಭಾರಿ ಮಳೆ ಆಗಲಿದೆ.
ಕರಾವಳಿ ಮತ್ತು ಮಲೆನಾಡಿನ ಭಾಗಗಳಲ್ಲಿ ವರುಣ ಅಬ್ಬರಿಸಲಿದ್ದಾನೆ. ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಈಗಾಗಲೇ ದಕ್ಷಿಣ ಕನ್ನಡ , ಉತ್ತರ ಕನ್ನಡ, ಕೊಡಗು, ಚಾಮರಾಜನಗರ, ಬೆಂಗಳೂರು ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ ಸುರಿದಿದ್ದು, ಅನೇಕ ಅನಾಹುತಗಳು ನಡೆದಿವೆ.