ಪತ್ನಿ , ಪುತ್ರಿ ಜೊತೆ ಹುಟ್ಟುಯ ಆಚರಿಸಿಕೊಂಡ ಧೋನಿ

Date:

ಟೀಂ‌ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ತನ್ನ ಪತ್ನಿ ಸಾಕ್ಷಿ ಹಾಗೂ ಪುತ್ರಿ ಝೀವಾ ಜೊತೆ ಕೇಕ್ ಕತ್ತರಿಸಿ ತಮ್ಮ 37ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.


ಇಂಗ್ಲೆಂಡ್ ಪ್ರವಾಸದಲ್ಲಿರುವ ಧೋನಿ ಹುಟ್ಟಹಬ್ಬ ಆಚರಿಸಿಕೊಂಡು ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.
ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ , ಕ್ರಿಕೆಟಿಗ ಸುರೇಶ್ ರೈನಾ ಸೇರಿದಂತೆ ಹಲವರು ಧೋನಿಗೆ ಟ್ವೀಟ್ ಮಾಡಿ ಶುಭಹಾರೈಸಿದ್ದಾರೆ.

ಧೋನಿ ನಿನ್ನೆ ನಡೆದ ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯ ಆಡುವ ಮೂಲಕ 500 ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನು ಆಡಿದ 3ನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

500 ಕ್ಕಿಂತ ಹೆಚ್ಚಿನ ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನು ಆಡಿದವರ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್(664) , ರಾಹುಲ್ ದ್ರಾವಿಡ್ (509) ಸಹ ಸ್ಥಾನ ಪಡೆದಿದ್ದು, ಶ್ರೀಲಂಕಾ ಆಟಗಾರ ಮಹೇಲಾ ಜಯವರ್ಧನೆ (652), ಕುಮಾರ ಸಂಗಾಕ್ಕರ (594), ಜಯಸೂರ್ಯ (586), ರಿಕಿ ಪಾಟಿಂಗ್ (560), ಶಾಹೀದ್ ಆಫ್ರಿದಿ (524) ಮತ್ತು ಜಾಕ್ ಕಾಲೀಸ್ (519) ಸ್ಥಾನ ಪಡೆದಿದ್ದಾರೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...