ಭಾರತೀಯರಿಗೆ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಗಿಂತ ಮಾಜಿ ನಾಯಕ ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿಯೇ ಅಚ್ಚುಮೆಚ್ಚು ಎಂದು ಸಂಶೋಧನೆಯೊಂದು ಹೇಳಿದೆ.
ಭಾರತೀಯರಿಗೆ ಯಾವ ಸೆಲಬ್ರಿಟಿ ಅಚ್ಚುಮೆಚ್ಚು ಎನ್ನುವ ಸಮೀಕ್ಷೆಯಲ್ಲಿ ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ಧೋನಿ ಎರಡನೇ ಸ್ಥಾನದಲ್ಲಿದ್ದಾರೆ.
yougov.co.UK ಎನ್ನುವ ಇಂಗ್ಲೆಂಡ್ ನ ವೆಬ್ ಸೈಟ್ ವೊಂದು ನಡೆಸಿದ ಈ ಸಮೀಕ್ಷೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮೊದಲ ಸ್ಥಾನ ಪಡೆದಿದ್ದು, ಮಹೇಂದ್ರ ಸಿಂಗ್ ಧೋನಿ 2ನೇ ಸ್ಥಾನ ಪಡೆದಿದ್ದಾರೆ. ಧೋನಿಗೆ 7.7ರಷ್ಟು ಮತಗಳು ಬಂದಿವೆ. ಶೇ. 6.8ರಷ್ಟು ಮತಗಳನ್ನು ಪಡೆದಿರುವ ಸಚಿನ್ ತೆಂಡೂಲ್ಕರ್ ಕ್ರೀಡಾಪಟುಗಳ ಪೈಕಿ 2ನೇ ಸ್ಥಾನದಲ್ಲಿದ್ದು, ಒಟ್ಟಾರೆ 6ನೇ ಸ್ಥಾನಪಡೆದಿದ್ದಾರೆ. ವಿರಾಟ್ ಕೊಹ್ಲಿ ಶೇ 4.8ರಷ್ಟು ಮತಗಳನ್ನಷ್ಟೇ ಪಡೆದಿದ್ದಾರೆ.