ಸವದತ್ತಿ ಕ್ಷೇತ್ರದ ಪರಾಜಿತ ಪಕ್ಷೇತರ ಅಭ್ಯರ್ಥಿ ಆನಂದ ಚೋಪ್ರಾ ಅವರು ಅಪಘಾತದಲ್ಲಿ ಗಾಯಗೊಂಡಿದ್ದಾರೆ.
ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದಾಗ ಹೂಲಿ ರಸ್ತೆ ಬಳಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ತಲೆಗೆ ತೀವ್ರ ಗಾಯವಾಗಿದ್ದು, ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಯತ್ನ ನಡೆಸಿದ್ದಾರೆ ಎಂದು ಕುಟುಂಬಸ್ಥರು ಸವದತ್ತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಅಪಘಾತ ನಡೆದ ಸ್ಥಳದಿಂದ ಸ್ವಲ್ಪ ದೂರದಲ್ಲೇ ರಾಡ್ ಪತ್ತೆಯಾಗಿದ್ದು ಅನೇಕ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಕಳೆದ ವಿಧಾಸಭಾ ಚುನಾವಣೆಯಲ್ಲಿ ಆನಂದ್ ಚೋಪ್ರಾ ಅವರು ಕಾಂಗ್ರೆಸ್ ನಿಂದ ಟಿಕೆಟ್ ತಪ್ಪಿದ್ದಕ್ಕೆ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದು ಸೋತಿದ್ದರು.