ಅಂಬಿಯಿಂದ ದರ್ಶನ್-ಸುದೀಪ್ ಒಂದಾದ್ರು….!‌ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ದಿಗ್ಗಜ ಗೆಳೆಯರು..!

Date:

ಅಂಬಿಯಿಂದ ದರ್ಶನ್-ಸುದೀಪ್ ಒಂದಾದ್ರು….!‌ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ದಿಗ್ಗಜ ಗೆಳೆಯರು..!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಅಭಿನಯ ಚಕ್ರವರ್ತಿ ಸುದೀಪ್ ತುಂಬಾ ಆತ್ಮೀಯ ಗೆಳೆಯರು. ಸ್ಯಾಂಡಲ್ ವುಡ್ ನ ಈ ದಿಗ್ಗಜ ಜೋಡಿಯ ನಡುವೆ ವೈಮನಸ್ಸು ಮೂಡಿ ವರ್ಷ ಕಳೆದಿದೆ. ಈಗ ಇವರನ್ನು ಮತ್ತೆ ಒಂದು ಮಾಡುವಲ್ಲಿ ರೆಬಲ್ ಸ್ಟಾರ್ ಅಂಬರೀಶ್ ಯಶಸ್ವಿಯಾಗಿದ್ದಾರೆ.


ಇಬ್ಬರ ನಡುವೆ ಮುನಿಸು ಶುರುವಾದಲ್ಲಿಂದ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿರಲಿಲ್ಲ. ಆದರೆ, ಈಗ ಅಂಬಿ ಇಂದಾಗಿ ವೇದಿಕೆ ಹಂಚಿಕೊಳ್ಳಲಿದ್ದಾರೆ ಈ ಸ್ಟಾರ್ ನಟರು.


ಅಂಬಿ ನಿಂಗೆ ವಯಸ್ಸಾಯ್ತೋ ಸಿನಿಮಾದ ಆಡಿಯೋ ಲಾಂಚ್ ನಲ್ಲಿ ಸುದೀಪ್ ಮತ್ತು ದರ್ಶನ್ ಒಂದಾಗಲಿದ್ದಾರೆ.
ಇದೇ 10ನೇ ತಾರೀಕು ನಡೆಯುವ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಈ ಗೆಳೆಯರಿಬ್ಬರು ಸೇರಿ ಆಡಿಯೋ ಲಾಂಚ್ ಮಾಡಲಿದ್ದಾರೆ.
ಸುದೀಪ್ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಜೊತೆಗೆ ನಿರ್ಮಾಣದ ಹೊಣೆ ಹೊತ್ತವರೂ ಇವರೇ. ಗುರುದತ್ ಗಾಣಿಗ ಚಿತ್ರವನ್ನು ನಿರ್ದೇಶಿಸಿದ್ದಾರೆ.
ಆಡಿಯೋ ಲಾಂಚ್ ಗೆ ಬರಲು ದರ್ಶನ್ ಒಪ್ಪಿದ್ದಾರೆ.
ರಜನಿಕಾಂತ್, ಚಿರಂಜೀವಿ, ಧನುಷ್ ಮೊದಲಾದ ದಕ್ಷಿಣ ಭಾರತದ ಸ್ಟಾರ್ ಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...