ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರು ವಿಧಿವಶರಾಗಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಕರ್ನಾಟಕದಿಂದ ತಮಿಳುನಾಡಿಗೆ ಹೋಗುವ ಎಲ್ಲ ವಾಹನಗಳನ್ನು ಪೊಲೀಸರು ಸೋಮವಾರಪೇಟೆ ಹಾಗೂ ಅತ್ತಿಬೆಲೆಯ ಬಳಿ ತಡೆ ಹಿಡಿದಿದ್ದಾರೆ. ಅಹಿತಕರ ಘಟನೆಗಳು ನಡೆಯದಂತೆ ಗಡಿ ಭಾಗದಲ್ಲಿ ಭದ್ರತೆ ಹೆಚ್ಚಿಸಿದ್ದಾರೆ.
ಕರುಣಾನಿಧಿಯವರ ನಿಧನದಿಂದಾಗಿ ಅಭಿಮಾನಿಗಳು ತಮಿಳುನಾಡಿನ ಹಲವು ಕಡೆ ದಾಳಿ ನಡೆಸುತ್ತಿದ್ದು, ಬಸ್ ಗಳ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ರಾಜ್ಯ ಪೊಲೀಸ್ ಇಲಾಖೆ ತಮಿಳುನಾಡಿಗೆ ತೆರಳುತ್ತಿದ್ದ ಎಲ್ಲಾ ವಾಹನಗಳನ್ನು ತಾತ್ಕಾಲಿಕವಾಗಿ ತಡೆಹಿಡಿದ್ದಾರೆ.