ಕಾಲೇಜಿಗೆ ಹೋಗಿದ್ದ ವಿದ್ಯಾರ್ಥಿನಿ ಹೆಣವಾಗಿ ಪತ್ತೆಯಾದ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮಣ್ಣೂರು ಗ್ರಾಮದ ನಿವಾಸಿ ರೇಣುಕಾ ಪಾಟೀಲ (17) ಹೆಣವಾಗಿ ಸಿಕ್ಕ ನತದೃಷ್ಟೆ. ಹಾವೇರಿಯ ಜಿಎಚ್ ಕಾಲೇಜಿನಲ್ಲಿ ಈಕೆ ದ್ವಿತೀಯ ಪಿಯುಸಿ ವ್ಯಾಸಂಗ ಮಾಡ್ತಿದ್ದಳು.
ಆಗಸ್ಟ್ 6ರಂದು ಎಂದಿನಂತೆ ಕಾಲೇಜಿಗೆ ಹೋದ ಇವಳು ಸಂಜೆಯಾದರೂ ಮನೆಗೆ ಬರದಿದ್ದರಿಂದ ಸಹಜ ಆತಂಕಕ್ಕೆ ಒಳಗಾದ ಪೋಷಕರು ಎಲ್ಲೆಡೆ ಹುಡುಕಾಟ ನಡೆಸಿದ್ದಾರೆ. ಬಳಿಕ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ರೇಣುಕಾಗೆ ಹುಡುಕಾಟ ನಡೆಸಿದ್ದಾರೆ. ವರದಹಳ್ಳಿ ಗ್ರಾಮದ ಸೇತುವೆ ಬಳಿ ಗುರುವಾರ ರೇಣುಕಾ ಶವ ಅರೆಬೆಂದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.