ಫೀಲ್ಡಿಂಗ್ ಆಯ್ಕೆಮಾಡಿಕೊಂಡ ಇಂಗ್ಲೆಂಡ್

Must read

ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯ ಇಂದು ಆರಂಭವಾಗಿದೆ. ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಲಾರ್ಡ್ಸ್ ಅಂಗಳದಲ್ಲಿ ನಿನ್ನೆ ಆರಂಭವಾಗಬೇಕಿದ್ದ ಪಂದ್ಯ ಮಳೆಯಿಂದಾಗಿ ಸಾಧ್ಯವಾಗಿರಲಿಲ್ಲ. ಎರಡನೇ ದಿನವಾದ ಇಂದ ಆರಂಭಗೊಂಡಿದ್ದು, ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದೆ. ‌ ಶಿಖರ್ ಧವನ್ ಬದಲಿಗೆ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಅವರಿಗೆ ಅವಕಾಶ ಕಲ್ಪಿಸಲಾಗಿದೆ. ಉಮೇಶ್ ಯಾದವ್ ಬದಲಿಗೆ ಕುಲ್ದೀಪ್ವಯಾದವ್ ಸ್ಥಾನ ಪಡೆದಿದ್ದಾರೆ.

ಇಂಗ್ಲೆಂಡ್ ತಂಡದಲ್ಲೂ ಸಹ ಎರಡು ಬದಲಾವಣೆ ಮಾಡಲಾಗಿದೆ. ಡೇವಿಡ್ ಮಲನ್ ಬದಲು ಯುವ ಬ್ಯಾಟ್ಸಮನ್ ಒಲ್ಲಿ ಪೋಪ್ ಸ್ಥಾನಗಿಟ್ಟಿಸಿಕೊಂಡಿದ್ದಾರೆ. ಆಲ್ ರೌಂಡರ್ ಬೆನ್ ಸ್ಟೋಕ್ಸ್ ಬದಲಿಗೆ ಕ್ರಿಸ್ ವೋಕ್ಸ್ ಗೆ ಅವಕಾಶ ನೀಡಲಾಗಿದೆ.

- Advertisement -spot_img

More articles

- Advertisement -spot_img

Latest article