ದೇಶ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿದೆ. ಪರಸ್ಪರ ಶುಭ ಕೋರುತ್ತಾ ಸ್ವಾತಂತ್ರ್ಯ ದಿನಾಚರಣೆ ಆಚರಿಸುತ್ತಿದ್ದೇವೆ.
ಅಂತೆಯೇ ಟೀಂ ಇಂಡಿಯಾ ಬ್ಯಾಟ್ಸ್‌ಮನ್ ಗೌತಮ್ ಗಂಭೀರ್ ದೇಶದ ಜನತೆಗೆ ವಿಶೇಷವಾದ ರೀತಿಯಲ್ಲಿ ಸ್ವಾತಂತ್ರ್ಯ ದಿನದ ಶುಭಾಶಯ ತಿಳಿಸಿದ್ದಾರೆ.
ಕುಟುಂಬ ಸಮೇತ ಗೌತಿ ಶುಭಶಾಯ ತಿಳಿಸಿದ್ದು ವಿಶೇಷವಾಗಿದೆ. ದೆಹಲಿಯ ಇಂಡಿಯಾ ಗೇಟ್ ಮುಂದೆ ತನ್ನ ಪತ್ನಿ ಮತ್ತು ಮಕ್ಕಳೊಂದಿಗೆ ತ್ರಿವರ್ಣ ಧ್ವಜ ಹಿಡಿದು ಫೋಟೋ ತೆಗೆಸಿಕೊಂಡಿರುವ ಗೌತಮ್ ಗಂಭೀರ್, ಈ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ದೇಶದ ಜನತೆಗೆ 72ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಹೇಳಿದ್ದಾರೆ.