ಸ್ಯಾಂಡಲ್ ವುಡ್ ನಟ ಜೈ ಜಗದೀಶ್ ಅವರ ಕಾರು ಅಪಘಾತಕ್ಕೀಡಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನಿಂದ ಚನ್ನರಾಯಪಟ್ಟಣ ಮೂಲಕ ಮಡಿಕೇರಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಮಾರ್ಗ ಮಧ್ಯೆ ಬೈಕ್ ಒಂದು ಅಡ್ಡ ಬಂದ ಪರಿಣಾಮ ಅದನ್ನು ತಪ್ಪಿಸಲು ಹೋಗಿ ಕಾರು ರಸ್ತೆ ಬದಿಯ ಗದ್ದೆಗೆ ನುಗ್ಗಿದೆ. ಘಟನೆಯಲ್ಲಿ ಜೈ ಜಗದೀಶ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೂಡಲೇ ಸ್ಥಳಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.






