ಕನ್ನಡತಿ, ಕಿರಿಕ್ ಪಾರ್ಟಿ ಸಿನಿಮಾ ಖ್ಯಾತಿಯ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಬೇಡಿಕೆ ಹೆಚ್ಚುತ್ತಿದೆ. ಸ್ಯಾಂಡಲ್ ವುಡ್ ನಲ್ಲಿ ಮಾತ್ರವಲ್ಲದೆ ಟಾಲಿವುಡ್ ನಲ್ಲೂ ರಶ್ಮಿಕಾ ಹವಾ ಕ್ರಿಯೇಟ್ ಮಾಡಿದ್ದಾರೆ.
‘ಚಲೊ’. ಸಿನಿಮಾ ಮೂಲಕ ಟಾಲಿವುಡ್ ಗೆ ಪಾದಾರ್ಪಣೆ ಮಾಡಿದೆ ಕನ್ನಡದ ಈ ಬೆಡಗಿ ಇಂದು ತೆಲುಗು ಚಿತ್ರರಂಗದಲ್ಲಿ ಬಹು ಬೇಡಿಕೆ ಇರುವ ನಟಿ. ಸಾಲು ಸಾಲು ಹಿಟ್ ಚಿತ್ರಗಳನ್ನು ಕೊಡುತ್ತಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ‘ಗೀತಾ ಗೋವಿಂದಂ’ ಚಿತ್ರ ಕೂಡ ಯಶಸ್ವಿ ಪ್ರದರ್ಶನ ಕಾಣುತ್ತಿದೆ.
ಹೀಗೆ ಬಾಲಿವುಡ್ ನಲ್ಲಿ ಸಿಕ್ಕಾಪಟ್ಟೆ ಬ್ಯುಸಿ ಇರುವ ಇವರು ಈಗ ಪಡೆಯುತ್ತಿರುವ ಸಂಭಾವನೆಗಿಂತ ದುಪ್ಪಟ್ಟು ಹೆಚ್ಚಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.