ಕೇವಲ 20 ಸೆಕೆಂಡ್ ಹೆಚ್ಚು ಕಮ್ಮಿ ಆಗಿದ್ದರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಜೀವಕ್ಕೆ ಅಪಾಯವಿತ್ತು ಎಂಬ ಸುದ್ದಿಯೊಂದು ಬಹಿರಂಗವಾಗಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ದೆಹಲಿಯಿಂದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದ ವಿಮಾನ ಕೇವಲ 20ಸೆಕೆಂಡ್ ಗಳ ಅಂತರದಲ್ಲಿ ಪತನಗೊಳ್ಳುವುದರಿಂದ ಪಾರಾಗಿದೆ ಎಂಬ ವಿಷಯ ಬದಲಾಗಿದೆ.
ಏಪ್ರಿಲ್ 26ರಂದು ರಾಹುಲ್ ಗಾಂಧಿ ಅವರು ದೆಹಲಿಯಿಂದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದ ವೇಳೆ ಬಾಡಿಗೆ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಅದೃಷ್ಟವಶಾತ್ ರಾಹುಲ್ ಪಾರಾಗಿದ್ದರು ಎಂದು ವರದಿಯಾಗಿದೆ.