ಸೆಪ್ಟೆಂಬರ್ 15 ರಿಂದ ಯುಎಇನಲ್ಲಿ ಆರಂಭವಾಗಲಿರುವ ಏಷ್ಯಾಕಪ್ ಟೂರ್ನಿಗೆ ಟೀಂ ಇಂಡಿಯಾವನ್ನು ಆಯ್ಕೆ ಮಾಡಿರುವುದು ಈಗಾಗಲೇ ನಿಮಗೆ ತಿಳಿದಿದೆ.
ವಿರಾಟ್ ಕೊಹ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಹಿಟ್ ಮ್ಯಾನ್ ರೋಹಿತ್ ಶರ್ಮಾ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ.
ಏಷ್ಯಾಕಪ್ ಗೆ ಆಯ್ಕೆ ಮಾಡಲಾದ 16 ಮಂದಿ ಆಟಗಾರರ ಪೈಕಿ ಅನುಭವಿಗಳಾದ ಯುವರಾಜ್ ಸಿಂಗ್ ಮತ್ತು ಸುರೇಶ್ ರೈನಾ ಅವರನ್ನು ಕಡೆಗಾಣಿಸಲಾಗಿದೆ. ಯುವಿ ಮತ್ತು ರೈನಾ ಅವರನ್ನು ಕೈ ಬಿಟ್ಟಿರುವುದು ಅಭಿಮಾನಿಗಳ ಅಸಮಧಾನಕ್ಕೆ ಕಾರಣವಾಗಿದೆ.
‘ನೋ ರೈನಾ , ನೋ ಯುವಿ, ನೋ ಏಷ್ಯಾಕಪ್’ ಎಂದು ಟ್ವೀಟ್ ಮಾಡುವ ಮೂಲಕ ಅಭಿಮಾನಿಗಳು ಬೇಸರ ಹೊರ ಹಾಕಿದ್ದಾರೆ.
No Raina , No Yuvi No Asia Cup
— ROHIT SHARMA (HITMAN) (@iTheRider1) September 1, 2018