ಲವ್ ಮಾಡಿದ, ಮದ್ವೆ ಆದ , ವೀಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಲಾರಂಭಿಸಿದ…!

Date:

ಜೈಲರ್ ಒಬ್ಬ ತನ್ನ ಪತ್ನಿಯ ಜೊತೆಗಿದ್ದ ವೀಡಿಯೋವನ್ನು ರೆಕಾರ್ಡ್ ಮಾಡಿ ಆಕೆಗೆ ಬ್ಲಾಕ್ ಮೇಲ್ ಮಾಡುತ್ತಿರುವ ಆರೋಪ ಕೇಳಿಬಂದಿದೆ.
ಒಡಿಶಾದ ಭದ್ರಾಕ್ ಜಿಲ್ಲೆಯಲ್ಲಿ ಘಟನೆ ನಡೆದಿರೋದು. ಜೈಲರ್ ಚಿನ್ಮಾಯ ಪತ್ರಾ ಆರೋಪಿ. ಒಡಿಶಾ ಪೊಲೀಸರು ಈತನನ್ನು ಬಂಧಿಸಿದ್ದಾರೆ.
ಐಪಿಸಿ ಸೆಕ್ಷನ್ ಐಪಿಸಿ ಸೆಕ್ಷನ್ 498ಎ, 494, 495, 406, 417, ಮತ್ತು 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ 2017ರ ಹುಡುಗಿಯೊಬ್ಬಳನ್ನು ಫೇಸ್ ಬುಕ್ ಮೂಲಕ ಪರಿಚಯ ಮಾಡಿಕೊಂಡಿದ್ದನು. ಆಕೆ ಬಾಲಸೋರ್ ನಲ್ಲಿರುವ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಪರಿಚಯ ಸ್ನೇಹವಾಗಿ ಬಳಿಕ ಇಬ್ಬರು ಪರಸ್ಪರ ಪ್ರೀತಿ ಮಾಡುತ್ತಿದ್ದರು.
ಮಯೂರ್ಭಂಜ್ ಜಿಲ್ಲೆಯ ಖಿಚಿಂಗ್ ಪ್ರದೇಶದ ಒಂದು ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ. ಇಬ್ಬರು ಎರಡು ತಿಂಗಳ ಕಾಲ ಸರ್ಕಾರಿ ಕ್ವಾರ್ಟರ್ಸ್ ನಲ್ಲಿ ವಾಸಿಸುತ್ತಿದ್ದರು. ಈ ಅವಧಿಯಲ್ಲಿ ಆರೋಪಿ ಇಬ್ಬರು ಒಟ್ಟಿಗೆ ಇದ್ದ ಕ್ಷಣಗಳನ್ನು ರೆಕಾರ್ಡ್ ಮಾಡಿಕೊಂಡು ಬಳಿಕ ಬ್ಲಾಕ್ ಮೇಲ್ ಮಾಡಲು ಆರಂಭಿಸಿದ್ದಾನೆ.‌

ಪ್ರೀತಿಸಿ ಮದುವೆಯಾದಕೆಗೆ ಪತ್ರಾನಿಗೆ ಈಗಾಗಲೇ ಮದುವೆಯಾಗಿ ಇಬ್ಬರು ಮಕ್ಕಳಿರುವ ಬಗ್ಗೆ ತಿಳಿದಿದೆ. ಆಗ ಆಕೆ ಪ್ರಶ್ನಿಸಿದ್ದಾಳೆ.
ಈ ವಿಷಯವನ್ನು ಯಾರಿಗೂ ಹೇಳಬಾರದು ಎಂದು ಬೆದರಿಕೆ ಹಾಕಿದ್ದಾನೆ. ಅಷ್ಟೇ ಅಲ್ಲದೇ ರೆಕಾರ್ಡ್ ಮಾಡಿದ್ದ ವಿಡಿಯೋವನ್ನು ತೋರಿಸಿ ಬ್ಲ್ಯಾಕ್ ಮೇಲೆ ಮಾಡಲು ಶುರುಮಾಡಿದ್ದಾನೆ.

ಕೊನೆಗೆ ಸಂತ್ರಸ್ತೆ ಆರೋಪಿ ಜೈಲರ್ ವಿರುದ್ಧ ಭದ್ರಕ್ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.

Share post:

Subscribe

spot_imgspot_img

Popular

More like this
Related

ನಾವು ಬಿಸಾಡುವ ಈ ವಸ್ತುವಿಗಿದೆ ವಿಷ ಸರ್ಪ ಓಡಿಸುವ ಶಕ್ತಿ; ಯಾವುದು?

ನಾವು ಬಿಸಾಡುವ ಈ ವಸ್ತುವಿಗಿದೆ ವಿಷ ಸರ್ಪ ಓಡಿಸುವ ಶಕ್ತಿ; ಯಾವುದು? ನಮ್ಮ...

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನ...

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿ

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು...

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ರಸ್ತೆ...