ಸರ್ಕಾರಿ ಬಸ್ಸೊಂದು ಕಣಿವೆಗೆ ಉರುಳಿ ಬಿದ್ದ ಪರಿಣಾಮ 34 ಮಂದಿ ಪ್ರಯಾಣಿಕರು ದುರ್ಮರಣವನ್ನಪ್ಪಿರುವ ಘಟನೆ ತೆಲಂಗಾಣದ ಜಗ್ತಿಯಾಲ್ ಜಿಲ್ಲೆಯಲ್ಲಿ ನಡೆದಿದೆ.
ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆಗೆ ಸೇರಿದ ಬಸ್ ಕರೀಂನಗರದ ಕೊಡಂಘಟ್ಟು ಬಳಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಇದರಿಂದ 34 ಮಂದಿ ಜೀವ ಕಳೆದುಕೊಂಡಿದ್ದರೆ, 20 ಮಂದಿಗೆ ಗಾಯಗಳಾಗಿವೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.