ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಅವರಿಂದ ಹಲ್ಲೆಗೊಳಗಾಗಿರುವ ಮಾರುತಿ ಘಟನೆಯ ಸಂಪೂರ್ಣ ವಿವವರನ್ನು ಹೇಳಿದ್ದಾರೆ.
ದುನಿಯಾ ವಿಜಯ್, ಡ್ರೈವರ್ ಪ್ರಸಾದ್ , ಕೋಚ್ ಮನೀತ್ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಸುಮಾರು ಒಂದುವರೆ ಘಂಟೆಗಳ ಕಾಲ ಕಾರ್ ನಲ್ಲಿ ಸುತ್ತಾಡಿಸಿ ಹಲ್ಲೆ ನಡೆಸಿದ್ದಾರೆ ಎಂದು ಜಿಮ್ ಟ್ರೈನರ್ ಪಾನಿಪೂರಿ ಕಿಟ್ಟಿ ಅಣ್ಣನ ಮಗ ಮಾರುತಿ ವಿವರಿಸಿದ್ದಾರೆ.
ವಸಂತನಗರದ ಅಂಬೇಡ್ಕರ್ ಭವನದಲ್ಲಿ ನಡೆಯುತ್ತಿರುವ ಬಾಡಿ ಬಿಲ್ಡಿಂಗ್ ಕಾಂಪಿಟೇಶನ್ ವೇಳೆ ಇಬ್ಬರ ನಡುವೆ ಜಗಳ ಆಗಿದ್ದು, ವಿಜಿ ಮಾರುತಿ ಮೇಲೆ ಹಲ್ಲೆ ನಡೆಸಿ, ಪೊಲೀಸರ ಅತಿಥಿಯಾಗಿದ್ದಾರೆ.