ಸೆ. 29 ಹಾಗೂ ಸೆ. 30 ರಂದು ರಾಜ್ಯದ ಯುವಕರಿಗೆ ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ ಎಂದು ಬೆಂಗಳೂರು ಜಿಲ್ಲಾಧಿಕಾರಿ ವಿಜಯ್ ಶಂಕರ್ ತಿಳಿಸಿದ್ದಾರೆ.
ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಉದ್ಯೋಗ ಮೇಳ ಉದ್ಘಾಟಿಸಲಿದ್ದಾರೆ. 10 ರಿಂದ 15 ಸಾವಿರ ಯುವಕರು ಭಾಗಿಯಾಗುವ ಸಾಧ್ಯತೆ ಇದೆ. ಜನತಾ ದರ್ಶನದಲ್ಲಿ ಅರ್ಜಿ ಸಲ್ಲಿಸಿರುವ ಮೂರು ಸಾವಿರ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ಫೋಸಿಸ್, ಶಾಹಿ ಎಂಟರ್ಪ್ರೈಸಸ್, ವಿವಿಧ ಬ್ಯಾಂಕ್ ಸೇರಿದಂತೆ 200 ಕಂಪೆನಿಗಳು ಭಾಗಿಯಾಗಲಿವೆ.
ಎಸ್ಎಸ್ಎಲ್ಸಿ, ಪಿಯುಸಿ, ಡಿಗ್ರಿ ಮಾಡಿರುವವರು ಕೂಡ ಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ. ಸ್ಕಿಲ್ ಡೆವಲಪ್ಮೆಂಟ್ ಅಡಿಯಲ್ಲಿ ಅರ್ಜಿ ಸಲ್ಲಿಸಿದವರಿಗೆ ಅವಕಾಶವಿದೆ ಎಂದರು.