ಖಾಸಗಿತನಕ್ಕೆ ಧಕ್ಕೆ ಸೇರಿದಂತೆ ಹತ್ತಾರು ಆಕ್ಷೇಪಣೆಗಳಿಂದ ವಿವಾದಕ್ಕೆ ಗುರಿಯಾಗಿರುವ ಆಧಾರ್ ಯೋಜನೆ ಸಾಂವಿಧಾನಿಕ ಸಿಂಧುತ್ವ ಹೊಂದಿದೆಯೇ ಇಲ್ಲವೆ ಎಂಬುದನ್ನು ಸುಪ್ರೀಂಕೋರ್ಟ್ ಇಂದು ತೀರ್ಪು ನೀಡಲಿದೆ.
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ ಆಧಾರ್ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾದ 27 ಅರ್ಜಿಗಳ ವಿಚಾರಣೆ ಪೂರೈಸಿದ್ದು, ಇಂದು ಮಹತ್ವದ ತೀರ್ಪು ನೀಡಲಿದೆ.
ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಪುಟ್ಟಸ್ವಾಮಿ ಮುಂದಾಳತ್ವದಲ್ಲಿ 27 ಅರ್ಜಿಗಳು ಆಧಾರ್‌ನ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ದ್ದವು. ಆಧಾರನ್ನು ಸರ್ಕಾರದ ವಿವಿಧ ಪ್ರಯೋಜನ ಪಡೆಯಲು ಕಡ್ಡಾಯ ಮಾಡಿದ್ದನ್ನು ಅರ್ಜಿಗಳಲ್ಲಿ ವಿರೋಧಿಸಲಾಗಿತ್ತು. ಜತೆಗೆ ಆಧಾರ್‌ನ ದತ್ತಾಂಶಗ ಳನ್ನು ಹ್ಯಾಕ್ ಮಾಡಿದರೆ ಅದು ರಾಷ್ಟ್ರೀಯ ಭದ್ರತೆಗೆ ಅಪಾಯ ತರುತ್ತದೆ.
ಖಾಸಗಿತನಕ್ಕೆ ಭಂಗ ಬರುತ್ತದೆ ಎಂದೂ ಅರ್ಜಿದಾರರು ವಾದಿಸಿದ್ದರು. ಆದರೆ ಸರ್ಕಾರಿ ಸೇವೆಗಳ ದುರುಪಯೋಗ ತಡೆದು, ಅರ್ಹ ಫಲಾನುಭವಿಗಳಿಗೆ ಸವಲತ್ತು ಲಭಿಸುವಂತಾಗಲು ಆಧಾರ್ ಅಗತ್ಯ. ಇದರಿಂದ ಸರ್ಕಾರದ ಬೊಕ್ಕ ಸಕ್ಕೂ ಹಣ ಉಳಿತಾಯವಾಗಿ, ಹಣದ ಪೋಲು ತಪ್ಪಲಿದೆ ಎಂದು ಸರ್ಕಾರ ವಾದ ಮಂಡಿಸಿತ್ತು. ಈ ಅರ್ಜಿಗಳ ಗುಚ್ಛವನ್ನು ನ್ಯಾಯಾಲಯ 4 ತಿಂಗಳ ಅವಧಿಯಲ್ಲಿ ಸುದೀರ್ಘ 38 ದಿವಸಗಳ ಕಾಲ ವಿಚಾರಣೆ ನಡೆಸಿದೆ.